RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಕೊರೋನಾ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು : ಶಾಸಕ ಬಾಲಚಂದ್ರ

ಗೋಕಾಕ:ಕೊರೋನಾ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು : ಶಾಸಕ ಬಾಲಚಂದ್ರ 

 

ಕೊರೋನಾ  ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು : ಶಾಸಕ ಬಾಲಚಂದ್ರ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 5 :

ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ್ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.
   ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ  ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳ ಟಾಸ್ಕ್ ಫೋರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ ನಿಯಂತ್ರಣಕ್ಕೆ ಎಲ್ಲರೂ ಶ್ರಮಿಸಬೇಕು. ಕೊರೋನಾ ಹರಡದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಅವರು ಹೇಳಿದರು.
    ಬಹುತೇಕ ಸೋಂಕಿತರಿಗೆ ಆಕ್ಸಿಜನ್ ಕೊರತೆ ಎದುರಾಗುತ್ತಿದೆ. ಇದನ್ನು ಸಮರ್ಥವಾಗಿ ಎದುರಿಸಲು ಈಗಾಗಲೇ ಗೋಕಾಕ್ ಸಾರ್ವಜನಿಕ ಆಸ್ಪತ್ರೆ, ಮಲ್ಲಾಪುರ ಪಿಜಿಯ ಮೋರಾರ್ಜಿ ವಸತಿ ಶಾಲೆ ಮತ್ತು ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಕ್ಸಿಜನ್ ಬೆಡ್ ಗಳ ವ್ಯವಸ್ಥೆ ಮಾಡಿರುವುದಾಗಿ ಅವರು ಹೇಳಿದರು. ಜೊತೆಗೆ ಈ ಮೂರು ಕೊವಿಡ್ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ರಾಮಬಾಣವಾಗಿರುವ ರೆಮ್ ಡೆಸಿವರ್ ಕೂಡ ಅಗತ್ಯವಿರುವಷ್ಟು ಲಭ್ಯ ಇವೆ. ಸೋಂಕಿತರಿಗೆ ಸದಾ ಕಾಲವೂ ಆಕ್ಸಿಜನ್ ಕೊರತೆ ಎದುರಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಸೋಂಕಿತರ ಆರೈಕೆಯಲ್ಲಿ ಯಾವುದೇ ಲೋಪವಾಗಬಾರದು ಎಂದು ಅವರು ತಿಳಿಸಿದರು.
    ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ವೈದ್ಯರನ್ನು ಭೆಟ್ಟಿಯಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಅಗತ್ಯವಿದ್ದರಷ್ಟೇ ಮಾತ್ರ ಅಸ್ಪತ್ರೆಗಳಿಗೆ ದಾಖಲಾಗಬೇಕು. ರೋಗ ಲಕ್ಷಣಗಳು ಕಂಡು ಬಂದಿದ್ದರೂ ಅಂಥವರು ವಿಳಂಬವಾಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ಇದರಿಂದಾಗಿಯೇ ಜೀವಹಾನಿಗಳು ಸಂಭವಿಸುತ್ತಿವೆ ಎಂದು ಹೇಳಿದರು.
   ಕೋವಿಡ್ ಲಸಿಕೆಗಳನ್ನು ಇದುವರೆಗೆ ಕೇವಲ ಶೇ. ೩೮ ರಷ್ಟು ಜನರು ಹಾಕಿಸಿಕೊಂಡಿದ್ದಾರೆ. ಶೇ. ೧೦೦ ರಷ್ಟು ಜನರು ಈ ಲಸಿಕೆಗಳನ್ನು ಹಾಕಿಸಿಕೊಳ್ಳಬೇಕು. ಸ್ಥಳೀಯ ಗ್ರಾಮ, ಪಟ್ಟಣ, ಪುರಸಭೆಯ ವ್ಯಾಪ್ತಿ ಮಟ್ಟದಲ್ಲಿ ಸಾರ್ವಜನಿಕರಿಗೆ ಈ ಬಗ್ಗೆ ತಿಳುವಳಿಕೆ ಮೂಡಿಸಲು ಅಧಿಕಾರಿಗಳು ಯತ್ನಿಸಬೇಕು.  ಮಹಾಮಾರಿ ಕೊರೋನಾ ಎರಡನೇ ಅಲೆಯನ್ನು ತಡೆಯಲಿಕ್ಕೆ ಜಾಗೃತಿ ಅಭಿಯಾನವನ್ನು ಯಶಸ್ವಿಯಾಗಿ ಮುಂದುವರೆಸಿಕೊಂಡು ಹೋಗುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಈ ಸಂದರ್ಭದಲ್ಲಿ ಗೋಕಾಕ್ ತಹಶೀಲ್ದಾರ ನವೀನ ಹುಲ್ಲೂರ, ಮೂಡಲಗಿ ತಹಶೀಲ್ದಾರ ಡಾ. ಮೋಹನ ಭಸ್ಮೆ, ಗೋಕಾಕ ಡಿವೈಎಸ್ಪಿ ಜಾವೇದ ಇನಾಂದಾರ, ತಾಲ್ಲೂಕಾ ವೈದ್ಯಾಧಿಕಾರಿ ಡಾ. ಮುತ್ತಣ್ಣಾ ಕೊಪ್ಪದ, ಗೋಕಾಕ್ ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರವೀಂದ್ರ ಆಂಟಿನ್, ಹಿರಿಯ ವೈದ್ಯ ಡಾ. ಆರ್.ಎಸ್. ಬೆಂಚಿನಮರ್ಡಿ, ಗೋಕಾಕ ನಗರಸಭೆ ಆಯುಕ್ತ ಶಿವಾನಂದ ಹಿರೇಮಠ, ಮೂಡಲಗಿ ಬಿಇಓ ಅಜೀತ ಮನ್ನಿಕೇರಿ, ಸಿಪಿಐ ಗೋಪಾಲ ರಾಠೋಡ, ಶ್ರೀಶೈಲ ಬ್ಯಾಕೋಡ, ಸರ್ವೇಶ್ವರ  ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಸಿಡಿಪಿಓ ವೈ. ಎಂ. ಗುಜನಟ್ಟಿ, ಬಿಸಿಎಂ ಅಧಿಕಾರಿ ಬಿಸಿರೊಟ್ಟಿ  ಸೇರಿದಂತೆ ಹಲವು ತಾಲ್ಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Related posts: