ಗೋಕಾಕ:ಲಸಿಕೆ ನೀಡುವಲ್ಲಿ ತಾರತಮ್ಯ : ಕೇಂದ್ರ ಸರಕಾರದ ವಿರುದ್ಧ ಕರವೇ ಪ್ರತಿಭಟನೆ
ಲಸಿಕೆ ನೀಡುವಲ್ಲಿ ತಾರತಮ್ಯ : ಕೇಂದ್ರ ಸರಕಾರದ ವಿರುದ್ಧ ಕರವೇ ಪ್ರತಿಭಟನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 10 :
ಕೇಂದ್ರ ಸರಕಾರ ಲಸಿಕೆ ನೀಡುವಲ್ಲಿ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಜನ್ಮದಿನದ ಪ್ರಯುಕ್ತ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಗುರುವಾರದಂದು ನಗರದ ವಾಲ್ಮೀಕಿ ವೃತ್ತದಲ್ಲಿ ಸೇರಿದ ಕರವೇ ಕಾರ್ಯಕರ್ತರು ಲಸಿಕೆ ಕೊಡಿ ಇಲ್ಲವೇ ಅಧಿಕಾರ ಬಿಡಿ ಎಂಬ ನಾಮಫಲಕಗಳನ್ನು ಪ್ರದರ್ಶಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು
ಈ ಸಂದರ್ಭದಲ್ಲಿ ಕೃಷ್ಣಾ ಖಾನಪ್ಪನವರ , ಹನಿಫಸಾಬ ಸನದಿ, ರಾಜು ಕೆಂಚನಗುಡ್ಡ, ಪ್ರತೀಕ ಪಾಟೀಲ, ಮುಗುಟ ಪೈಲವಾನ ಉಪಸ್ಥಿತರಿದ್ದರು