ಗೋಕಾಕ:ಕಟ್ಟಡ ಕಾರ್ಮಿಕರಿಗೆ ಅವಶ್ಯಕ ಇರುವ ಉಪಕರಣಗಳನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ
ಕಟ್ಟಡ ಕಾರ್ಮಿಕರಿಗೆ ಅವಶ್ಯಕ ಇರುವ ಉಪಕರಣಗಳನ್ನು ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 16 :
ಕಾರ್ಮಿಕ ಇಲಾಖೆಯಿಂದ ಕಟ್ಟಡ ಕಾರ್ಮಿಕರಿಗೆ ಅವಶ್ಯಕ ಇರುವ ಉಪಕರಣಗಳು ಹಾಗೂ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನದ ಚೆಕಗಳನ್ನು ಶಾಸಕ ರಮೇಶ ಜಾರಕಿಹೊಳಿ ಅವರು ಬುಧವಾರದಂದು ನಗರದ ತಮ್ಮ ಕಾರ್ಯಾಲಯದ ಆವರಣದಲ್ಲಿ ನೊಂದಾಯಿತ ಕಾರ್ಮಿಕರಿಗೆ ವಿತರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಟಿ.ಆರ್.ಕಾಗಲ್, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ , ಕಾರ್ಮಿಕ ನಿರೀಕ್ಷ ಪಾಂಡುರಂಗ ಮಾವರಕರ ಸೇರಿದಂತೆ ಅನೇಕರು ಇದ್ದರು.