RNI NO. KARKAN/2006/27779|Friday, November 22, 2024
You are here: Home » breaking news » ಗೋಕಾಕ:ತೈಲ, ವಿದ್ಯುತ್ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಮನವಿ

ಗೋಕಾಕ:ತೈಲ, ವಿದ್ಯುತ್ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಮನವಿ 

ತೈಲ, ವಿದ್ಯುತ್ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಮನವಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 17 :

 

ತೈಲ, ವಿದ್ಯುತ್ ಹಾಗೂ ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವಂತೆ ಆಗ್ರಹಿಸಿ ಇಲ್ಲಿನ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಗುರುವಾರದಂದು ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿದರು.

ಕಳೆದ ಹಲವು ತಿಂಗಳಲ್ಲಿ ರಾಜ್ಯದಲ್ಲಿ ಪೆಟ್ರೋಲ್ , ಡಿಸೇಲ್ , ವಿದ್ಯುತ್ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೆರಿದ್ದು, ಇದರಿಂದ ಸಾರ್ವಜನಿಕರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ.

ಕಳೆದ 2 ತಿಂಗಳಿನಿಂದ ಕೊರೋನಾ ಮಹಾಮಾರಿಯಿಂದ ರಾಜ್ಯ ಸಂಪೂರ್ಣ ಲಾಕಡೌನ ಆಗಿದ್ದು, ಇದರಿಂದ ರಾಜ್ಯದ ಸಾವಿರಾರು ಕುಟುಂಬಗಳು ದುಡಿಮೆ ಇಲ್ಲದೆ ಕಂಗಾಲಾಗಿವೆ ಇಂತಹ ಸಮಯದಲ್ಲಿ ರಾಜ್ಯದಲ್ಲಿ ಪೆಟ್ರೋಲ್ , ಡಿಜೆಲ್, ವಿದ್ಯುತ್ ಬೆಲೆಗಳ ದರ ದಿನೆ ದಿನೆ ಏರಿಕೆಯಾಗುತ್ತಿರುವ ಜೊತೆಗೆ ಅಗತ್ಯ ವಸ್ತುಗಳಾದ ಅಡುಗೆ ಎಣ್ಣೆ , ಬೆಳೆ, ಕಾಳುಗಳ ಬೆಲೆಯೂ ಸಹ ಗಗನಕ್ಕೆ ಏರಿದೆ ಇದರಿಂದ ರಾಜ್ಯದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದದರಿಂದ ತಾವುಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಇವುಗಳ ಮೇಲೆ ವಿಧಿಸಿರುವ ತೆರಿಗೆ ಹಣವನ್ನು ಕಡಿಮೆ ಸರಕಾರದಿಂದಲೆ ಭರಿಸಲು ಕ್ರಮ ಕೈಗೊಳ್ಳಬೇಕೆಂದು ಜಯ ಕರ್ನಾಟಕ ಸಂಘಟನೆಯ ಸದಸ್ಯರು ಸಮಸ್ತ ಜನರ ಪರವಾಗಿ ಮನವಿಯಲ್ಲಿ ವಿನಂತಿಸಿದ್ದಾರೆ.

ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಘಟನೆಯ ಮುಖಂಡರಾದ ಮಲಿಕಜಾನ ತಲವಾರ, ಹಮೀದ ಗುಡವಾಲೆ, ರಪೀಕ ನಂದಗಡಕರ, ಬಾಳೇಶ ಪೂಜೇರಿ, ದಸ್ತಗೀರ ಮುಲ್ಲಾ, ರಮೇಶ ತಾರಿಹಾಳ, ಮುಬಾಕರ ಬಾಳೆಕುಂದ್ರಿ, ಶಬ್ಬೀರ ಮುಲ್ಲಾ ಉಪಸ್ಥಿತರಿದ್ದರು

Related posts: