RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾಸ್ಕ ಹಾಗೂ ಸ್ಯಾನಿಟೈಜರ ಹಸ್ತಾಂತರಿಸಿದ ಶಾಸಕ ರಮೇಶ

ಗೋಕಾಕ:ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾಸ್ಕ ಹಾಗೂ ಸ್ಯಾನಿಟೈಜರ ಹಸ್ತಾಂತರಿಸಿದ ಶಾಸಕ ರಮೇಶ 

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಮಾಸ್ಕ ಹಾಗೂ ಸ್ಯಾನಿಟೈಜರ ಹಸ್ತಾಂತರಿಸಿದ ಶಾಸಕ ರಮೇಶ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 10 :

 

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಪತ್ರಗಳನ್ನು ಬರೆದು ವಿದ್ಯಾರ್ಥಿಗಳಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ಮಾಡಿದ್ದಲ್ಲದೇ ವಿದ್ಯಾರ್ಥಿಗಳಿಗೆ ಮಾಸ್ಕ ಹಾಗೂ ಸ್ಯಾನಿಟೈಸರ್ ವಿತರಿಸಿ ವಿದ್ಯಾರ್ಥಿಗಳು ಧೈರ್ಯದಿಂದ ಪರಿಕ್ಷೆ ಬರೆಯಲು ಪ್ರೇರಿಪಿಸಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಹೇಳಿದರು.
ಅವರು, ನಗರದ ಶಾಸಕರ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಿದ ಮಾಸ್ಕ ಹಾಗೂ ಸ್ಯಾನಿಟೈಸರ್‍ಗಳನ್ನು ಪಡೆದು ಮಾತನಾಡಿದರು.
ಗೋಕಾಕ ಶೈಕ್ಷಣಿಕ ವಲಯಕ್ಕೆ ಶಾಸಕ ರಮೇಶ ಜಾರಕಿಹೊಳಿ ಅವರ ಕೊಡುಗೆ ಅಪಾರವಾಗಿದೆ. ಗೋಕಾಕ ಶೈಕ್ಷಣಿಕ ವಲಯಕ್ಕೆ ಆರು ಹೊಸ ಸರಕಾರಿ ಆಂಗ್ಲ ಮಾಧ್ಯಮ ಶಾಲೆಗಳನ್ನು ಮಂಜೂರು ಮಾಡುವ ಮೂಲಕ ಬಡ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಶಾಲು ಹೊದಿಸಿ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಜಿಪಂ ಸದಸ್ಯರಾದ ಟಿ ಆರ್ ಕಾಗಲ, ಮಡ್ಡೆಪ್ಪ ತೋಳಿನವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಸುರೇಶ ಸನದಿ, ಕಾಂತು ಎತ್ತಿನಮನಿ, ಜೆ ಆರ್ ಮಾಳಗಿ ಸೇರಿದಂತೆ ಶಿಕ್ಷಕರು ಇದ್ದರು.

Related posts: