ಗೋಕಾಕ:ನಾಳೆ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಸಂದರ್ಶನ
ನಾಳೆ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಸಂದರ್ಶನ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 19 :
ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು ನೇರ ಪ್ರತಿನಿಧಿಗಳ ನಿಯುಕ್ತಿಗಾಗಿ ಮಂಗಳವಾರ ದಿನಾಂಕ 20 ರಂದು ಸಂದರ್ಶನ ನಡೆಯಲಿದೆ ಎಂದು ಗೋಕಾಕ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಂಗಳವಾರ ದಿ.20 ರಂದು ನಗರದ ಯೋಗಿಕೋಳ್ಳ ರಸ್ತೆಯಲ್ಲಿರುವ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ಬೆಳಿಗ್ಗೆ 11 ಘಂಟೆಯಿಂದ ಸಂದರ್ಶನ ನಡೆಯಲಿದ್ದು, ವಿಮೆ ಮಾರಟ ಪ್ರತಿನಿಧಿಗಳ ಆಯ್ಕೆ ಬಯಿಸಿರುವ ಅಭ್ಯರ್ಥಿಗಳು ಕಡ್ಡಾಯವಾಗಿ 10ನೇ ತರಗತಿಯನ್ನು ಉತ್ತೀರ್ಣರಾಗಬೇಕು. ವಯೋಮಿತಿ 18 ರಿಂದ 50 ವರ್ಷಗಳಾಗಿರಬೇಕು. ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಂಜಟರು ಹಾಗೂ ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು , ನಿವೃತ್ತ ಪ್ರಧಾನ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಂಚೆ ವಿಭಾಗದ ಮುಖ್ಯಸ್ಥರಿಗೆ ಸಮಂಜಸವೆಂದು ಕಂಡು ಬಂದ ಯಾವುದೇ ಅಭ್ಯರ್ಥಿಗಳಿಗೆ ಆಯ್ಕೆಯಾದ ಪಕ್ಷದಲ್ಲಿ ಅವಕಾಶ ನೀಡಲಾಗುವುದು . ನುರಿತ , ಸಂವಹನ ಕಲೆ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ರೂ. 5 ಸಾವಿರ ಗಳನ್ನು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿಯನ್ನು ಇಡಬೇಕಾಗುತ್ತದೆ. ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರಕ್ಕೆ ತಕ್ಕಂತೆ ಸೂಕ್ತ ಕಮೀಶನ ನೀಡಲಾಗುವುದು ಎಂದು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.