RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಬಾಲಚಂದ್ರ ಜಾರಕಿಹೊಳಿ ಮತ್ತು ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡಿ : ಮಾದಿಗ ಸಮಾಜದ ಆಗ್ರಹ

ಗೋಕಾಕ:ಬಾಲಚಂದ್ರ ಜಾರಕಿಹೊಳಿ ಮತ್ತು ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡಿ : ಮಾದಿಗ ಸಮಾಜದ ಆಗ್ರಹ 

ಬಾಲಚಂದ್ರ ಜಾರಕಿಹೊಳಿ ಮತ್ತು ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡಿ : ಮಾದಿಗ ಸಮಾಜದ ಆಗ್ರಹ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 23 :

 

ರಾಜ್ಯದಲ್ಲಿ ದಿ.26 ರಂದು ಮುಖ್ಯಮಂತ್ರಿ ಬದಲಾವಣೆಯೊಂದಿಗೆ ಸಂಪುಟ ಪುನರ ರಚನೆಯ ಕೂಗು ಕೇಳಿ ಬರುತ್ತಿದ್ದು, ಆ ಸಂದರ್ಭದಲ್ಲಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಸಚಿವ ಖಾತೆಯೊಂದಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಹಾಗೂ ದುರ್ಯೋಧನ ಐಹೊಳೆ ಅವರಿಗೆ ಸಚಿವ ಸ್ಥಾನ ನೀಡಬೇಕಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಆಗ್ರಹಿಸಿದರು.

ಶುಕ್ರವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು ಬೆಳಗಾವಿ ರಾಜ್ಯದ ಎರಡನೇ ರಾಜ್ಯಧಾನಿ ಎಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಐದು ಲಕ್ಷಕ್ಕೂ ಅಧಿಕ ಮಾದಿಗ ಸಮಾಜ ಮತದಾರರು ಇದ್ದಾರೆ. ಬಹು ವರ್ಷಗಳಿಂದ ತುಳಿತಕ್ಕೆ ಒಳಗಾಗಿರುವ ಈ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು. ಜಿಲ್ಲೆಯಲ್ಲಿ ರಾಯಬಾಗ ಮತಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ ದುರ್ಯೋಧನ ಐಹೊಳೆ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು. ಜಿಲ್ಲೆಯಲ್ಲಿ ದಲಿತರ ಸಮಸ್ಯೆಗಳಿಗೆ ಸ್ವಂದಿಸಿ ವಿವಿಧ ಚುನಾವಣೆಗಳಲ್ಲಿ ತಮ್ಮದೇ ಛಾಪು ಮೂಡಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆಯೊಂದಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ನೀಡಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಸಮಾಜದ ರಾಜ್ಯ ಸಂಘಟನಾ ಸಂಚಾಲಕ ಸತ್ಯೆಪ್ಪ ಕಡೆವಾಡಿ, ಜಿಲ್ಲಾಧ್ಯಕ್ಷ ರಮೇಶ ಮಾದರ , ತಾಲೂಕಾಧ್ಯಕ್ಷ ಬಸವರಾಜ ಕಾಡಾಪೂರ, ಮುಖಂಡರಾದ ಕಾಡಪ್ಪ ಮೇಸ್ತ್ರಿ, ಯಾಕುಬ ಸರ್ವಿ, ಕಿರಣ ಮಾದರ, ಯುಬಿನೈಜರ ಕರಬನ್ನವರ ಇದ್ದರು.

Related posts: