RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಲುಪಿಸಿ : ಬಸವರಾಜ ಯಕಾಂಜಿ

ಗೋಕಾಕ:ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಲುಪಿಸಿ : ಬಸವರಾಜ ಯಕಾಂಜಿ 

ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಲುಪಿಸಿ : ಬಸವರಾಜ ಯಕಾಂಜಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 23 :

 
ಪ್ರಧಾನಿ ಮೋದಿ ಮತ್ತು ಸಿಎಂ ಯಡಿಯೂರಪ್ಪ ಜಾರಿಗೆ ತಂದಿರುವ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಪಕ್ಷದ ಕಾರ್ಯಕರ್ತರು ಮಾಡಬೇಕಾಗಿದೆ ಎಂದು ಬೆಳಗಾವಿ ನಗರದ ಸಹ ಸಂಚಾಲಕರಾದ ಬಸವರಾಜ ಯಕಾಂಜಿ ಹೇಳಿದರು.

ಶುಕ್ರವಾರದಂದು ನಗರದ ಶಾಸರಕರ ಕಛೇರಿಯಲ್ಲಿ ಭಾರತೀಯ ಜನತಾ ಪಾರ್ಟಿ, ಬೆಳಗಾವಿ ಗ್ರಾಮಾಂತರ ಜಿಲ್ಲೆ ಹಮ್ಮಿಕೊಂಡ ಗೋಕಾಕ ನಗರ ಮಂಡಲ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಯಡಿಯೂರಪ್ಪ ನವರ ಕಳೆದ ಎರೆಡು ವರ್ಷಗಳಿಂದ ರಾಜ್ಯಕ್ಕೆ ಮಾದರಿಯಾಗುವ ಯೋಜನೆಗಳನ್ನು ಜನಸಾಮಾನ್ಯರಿಗೆ ನೀಡಿದ್ದಾರೆ ಹಾಗಾಗಿ ಪಕ್ಷದ ಕೈ ಬಲ ಪಡಿಸಲು ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಬೇಕೆಂದು ಹೇಳಿದರು.
ಪ್ರಂಚದಲ್ಲಿ ಭಾರತದ ಹಿರಿಮೆ ಗರಿಮೆ ಹೆಚ್ಚಿಸಿದ ಕೀರ್ತಿ ನರೇಂದ್ರ ಮೋದಿಜೀ ಅವರಿಗೆ ಸಲ್ಲಬೇಕು.ದೇಶದವನ್ನು ಬಲಿಷ್ಠ ಮಾಡುವ ಪ್ರಯತ್ನ ಬಿಜೆಪಿ ಪಕ್ಷದಿಂದ ನಡೆಯುತ್ತಿದೆ ಕಾರ್ಯಕರ್ತರು ಸಹ ಪಕ್ಷ ನೀಡುವ ಸೂಚನೆಗಳನ್ನು ಪಾಲಿಸಿ ರಾಜ್ಯದಲ್ಲಿ ಪಕ್ಷವನ್ನು ಬೇರು ಮಟ್ಟದಲ್ಲಿ ಗಟ್ಟಿಗೋಳಿಸಬೇಕೆಂದು ಬಸವರಾಜ ಯಕಾಂಚಿ ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರೇಮಾ ಭಂಡಾರಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಮಹೇಶ ಮೋಹಿತೆ, ಸಂದಿಪ ದೇಶಪಾಂಡೆ, ಸುಭಾಶ ಪಾಟೀಲ ,ಶ್ರೀಮತಿ ರಾಜೇಶ್ವರಿ ಒಡೆಯರ ಸೇರಿದಂತೆ ಇತರರು ಇದ್ದರು.

Related posts: