ಗೋಕಾಕ:ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ನೂತನ ಸಿಎಂ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 27 :
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಬೊಮ್ಮಾಯಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವುದರಿಂದ ಸರ್ಕಾರ ಮತ್ತು ಭಾರತೀಯ ಜನತಾ ಪಾರ್ಟಿಯ ಸಂಘಟನೆ ಹೆಚ್ಚು ಬಲಶಾಲಿಯಾಗಲಿದೆ. ಕ್ರಿಯಾಶೀಲ ವ್ಯಕ್ತಿತ್ವದ ಸ್ನೇಹಜೀವಿಯಾಗಿರುವ ಬೊಮ್ಮಾಯಿ ಅವರಿಂದ ರಾಜ್ಯ ಮತ್ತಷ್ಟು ಅಭಿವೃದ್ಧಿ ಕಾಣಲಿದೆ. ಇವರ ಆಯ್ಕೆಯಿಂದ ನಮ್ಮ ಉತ್ತರ ಕರ್ನಾಟಕಕ್ಕೂ ಹೆಚ್ಚಿನ ಅನುಕೂಲವಾಗಲಿದೆ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಗೃಹ, ಜಲಸಂಪನ್ಮೂಲ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಗಳ ಸಚಿವರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ. ಉತ್ತಮ ಸಂಸದೀಯ ಪಟು ಆಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.