RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ : ಗೋಕಾಕ ಮತಕ್ಷೇತ್ರದ 5 ಗ್ರಾಮಗಳು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಅಭಿವೃದ್ಧಿ

ಗೋಕಾಕ : ಗೋಕಾಕ ಮತಕ್ಷೇತ್ರದ 5 ಗ್ರಾಮಗಳು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಅಭಿವೃದ್ಧಿ 

ಗೋಕಾಕ ಮತಕ್ಷೇತ್ರದ 5 ಗ್ರಾಮಗಳು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಅಭಿವೃದ್ಧಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 31 :

 

ಗೋಕಾಕ ಮತಕ್ಷೇತ್ರದಲ್ಲಿ ಬರುವ ಪ.ಜಾತಿ ಮತ್ತು ಪ.ಪಂಗಡ ಸಮುದಾಯಕ್ಕೆ ಸೇರಿದ ಹೆಚ್ಚಿನ ಸಂಖ್ಯೆಯಲ್ಲಿ ಇರುವ 5 ಗ್ರಾಮಗಳನ್ನು ಎಸ್.ಸಿ.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರ ಪ್ರಯತ್ನದಿಂದ ಆಯ್ಕೆ ಮಾಡಲಾಗಿದ್ದು, ಶಾಸಕರ ಈ ಕಾರ್ಯವನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಗೋಕಾಕ ಮತಕ್ಷೇತ್ರದ ಜಮನಾಳ, ಯದ್ದಲಗುಡ್ಡ, ಗಿಳಿಹೊಸೂರು, ರಾಜನಕಟ್ಟಿ, ಕೇಸಪ್ಪನಟ್ಟಿ ಗ್ರಾಮಗಳಲ್ಲಿ ಅಂಗನವಾಡಿ ಕಟ್ಟಡ, ರಸ್ತೆ ಸುಧಾರಣೆ, ಚರಂಡಿ, ಓದುವ ಬೆಳಕು ಕೇಂದ್ರಗಳ(ಗ್ರಂಥಾಲಯ) ದುರಸ್ಥಿ, ವಸತಿ ನಿಲಯಗಳಿಗೆ ಕಟ್ಟಡ ದುರಸ್ಥಿ, ಶೌಚಾಲಯ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ಸ್ವ-ಸಹಾಯ ಸಂಘಗಳಿಗೆ ವರ್ಕಶೆಡ್ ನಿರ್ಮಾಣ ಹೀಗೆ ಹಲವಾರು ಕಾಮಗಾರಿಗಳನ್ನು ಆಯ್ಕೆ ಮಾಡಿದ್ದು, ಶೀಘ್ರದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುತ್ತಿದ್ದು, ಜನತೆ ಈ ಯೋಜನೆ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸಮುದಾಯದ ಮುಖಂಡರುಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

Related posts:

ಗೋಕಾಕ:ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಪುಣ್ಯ ಪ್ರಾಪ್ತಿಯಾಗುತ್ತದೆ : ಶ್ರೀ ನಾಗೇಶ್ವರ ಸ್ವಾಮಿಜಿ

ಬೆಳಗಾವಿ:ಶಿವಾಜಿ ಮಹಾರಾಜ ಚೌಕದಲ್ಲಿ ರಾಯಣ್ಣ ಪ್ರತಿಷ್ಠಾಪನೆ : ಕನ್ನಡ ಮತ್ತು ಮರಾಠಿ ಮುಖಂಡರ ಸಭೆಯಲ್ಲಿ ಒಮ್ಮತದ ನಿರ್ಧಾ…

ಗೋಕಾಕ:ರಮೇಶ ಜಾರಕಿಹೊಳಿ ಅವರನ್ನು ಪುನಃ ಜಲಸಂಪನ್ಮೂಲ ಸಚಿವರಾಗಿ ಮಾಡಬೇಕೆಂದು ಆಗ್ರಹಿಸಿ ಖನಗಾಂವ ಮತ್ತು ಮಿಡಕನಟ್ಟಿ ಗ್ರ…