ಸವದತ್ತಿ: ತಾಲೂಕಿನ 44 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋಟಿ ವೃಕ್ಷ ಅಭಿಯಾನ : ಶಂಕರ ಅಂತರಗಟ್ಟಿ
ತಾಲೂಕಿನ 44 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋಟಿ ವೃಕ್ಷ ಅಭಿಯಾನ : ಶಂಕರ ಅಂತರಗಟ್ಟಿ
ನಮ್ಮ ಬೆಳಗಾವಿ ಇ – ವಾರ್ತೆ, ಸವದತ್ತಿ ಅ 18 :
ಸವದತ್ತಿ ತಾಲೂಕಿನ 44 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋಟಿ ವೃಕ್ಷ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ವಲಯ ಅರಣ್ಯಾಧಿಕಾರಿ ಶಂಕರ ಅಂತರಗಟ್ಟಿ ಹೇಳಿದರು
ಬುಧವಾರದಂದು ನಗರದ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಕೋಟಿ ವೃಕ್ಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಸುಂದರ ಮತ್ತು ಸ್ವಚ್ಛ ಪರಿಸರ ನಿರ್ಮಾಣ ಮಾಡುವ ಉದ್ದೇಶದಿಂದ ಈ ಮಹತ್ವದ ಯೋಜನೆಗೆ ಚಾಲನೆ ನೀಡಲಾಗಿದ್ದು, ತಾಲೂಕಿನಾದ್ಯಂತ ಕೋಟಿ ವೃಕ್ಷಗಳನ್ನು ನೆಡುವ ಕಾರ್ಯಕ್ರಮ ಇದ್ದಾಗಿದ್ದು, ಸಾರ್ವಜನಿಕರು ಇದರ ಲಾಭವನ್ನು ಪಡೆದುಕೊಂಡು ಗಿಡಮರಗಳನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕೆಂದು ಶಂಕರ ಅಂತರಗಟ್ಟಿ ಹೇಳಿದರು .
ಈ ಸಂದರ್ಭದಲ್ಲಿ ತಾಪಂ ಇಓ ಯಶವಂತಕುಮಾರ, ತಾಪಂ ಎಡಿ ಸಂಗನಗೌಡ ಹಂದ್ರಾಳ,ಸಾಮಾಜಿಕ ವಲಯ ಉಪ ಅರಣ್ಯಾಧಿಕಾರಿಗಳಾದ ಎಸ್.ಬಿ.ಪಾವಟೆ,ಈರಣ್ಣಾ ಇಟ್ನಾಳ, ಸಿಬ್ಬಂದಿಗಳಾದ ರಮೇಶ ಸೊನೆರ, ಎಚ್.ಬಿ.ಪಾಲನಗಡ, ಸಿದ್ದರಡ್ಡಿ ಸೋಮರೆಡ್ಡಿ ,ಪಿಡಿಒ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಬಾರ್ಕಿ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು .