ಗೋಕಾಕ:ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರು ಜನರ ಮನದಲ್ಲಿ ಉಳಿದಿದ್ದಾರೆ : ಡಾ.ರಾಜೇಂದ್ರ ಸಣ್ಣಕ್ಕಿ
ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರು ಜನರ ಮನದಲ್ಲಿ ಉಳಿದಿದ್ದಾರೆ : ಡಾ.ರಾಜೇಂದ್ರ ಸಣ್ಣಕ್ಕಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 20 :
ದಕ್ಷ ಆಡಳಿತದಿಂದ ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸಿದ್ದ ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸು ಅವರು ಜನರ ಮನದಲ್ಲಿ ಉಳಿದಿದ್ದಾರೆ ಎಂದು ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದರು.
ಶುಕ್ರವಾರದಂದು ನಗರದ ತಾಪಂ ಸಭಾಂಗಣದಲ್ಲಿ ತಾಲೂಕಾಡಳಿತ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡ ದಿ.ದೇವರಾಜ ಅರಸು ಅವರ 106ನೇ ಜನ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅರಸು ಅವರು ಆದರ್ಶ ವ್ಯಕ್ತಿಯಾಗಿದ್ದು, ಅವರ ಜನಪರ ಆಡಳಿತದಿಂದ ಇತರರಿಗೆ ಮಾದರಿಯಾಗಿದ್ದರು. ಹಿಂದುಳಿದ ವರ್ಗಗಳ ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಅಭಿವೃದ್ಧಿಗಾಗಿ ಶ್ರಮವಹಿಸಿದ್ದಾರೆಂದು ಡಾ.ರಾಜೇಂದ್ರ ಹೇಳಿದರು.
ಇದೇ ಸಂದರ್ಭದಲ್ಲಿ ಸರಕಾರಿ ವಸತಿ ನಿಲಯಗಳಿದ್ದು, ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳನ್ನೂ ಸತ್ಕರಿಸಲಾಯಿತು.
ವೇದಿಕೆಯ ಮೇಲೆ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಗ್ರೇಡ್ 2 ತಹಶೀಲ್ದಾರ ಲಕ್ಷ್ಮಣ ಬೋವಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಆರ್.ಕೆ ಬಿಸಿರೋಟ್ಟಿ ಸೇರಿದಂತೆ ಅನೇಕರು ಇದ್ದರು.