ಗೋಕಾಕ:ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಸುಧಾರಣೆಯಾದರೆ ಮಾತ್ರ ಗ್ರಾಮಗಳು ಅಭಿವೃದ್ಧಿ : ಶಾಸಕ ರಮೇಶ ಜಾರಕಿಹೊಳಿ
ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಸುಧಾರಣೆಯಾದರೆ ಮಾತ್ರ ಗ್ರಾಮಗಳು ಅಭಿವೃದ್ಧಿ : ಶಾಸಕ ರಮೇಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 21 :
ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳು ಸುಧಾರಣೆಯಾದರೆ ಮಾತ್ರ ಗ್ರಾಮಗಳು ಅಭಿವೃದ್ಧಿಯಾಗಲಿದ್ದು ಕೆಲ ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ 23 ಕೋಟಿ ರೂಗಳ ಅನುದಾನವನ್ನು ನೀಡಲಾಗುತ್ತಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಶನಿವಾರದಂದು ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ನೀರಾವರಿ ಇಲಾಖೆಯಿಂದ ಮಂಜೂರಾದ ಕೊಣ್ಣೂರ ಗ್ರಾಮದದಿಂದ ತಾಲೂಕಿನ ಗಡಿ ಗ್ರಾಮಗಳವರೆಗೆ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ತಾಲೂಕಿನ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ ಆಗಿದೆ. ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿ ಆಗುವುದಿಲ್ಲ. ಗುಣಮಟ್ಟದ ಕಾಮಗಾರಿಯನ್ನು ಗುತ್ತಿಗೆದಾರರು ಮಾಡಬೇಕು. ಕಾಮಗಾರಿ ನಡೆಯುವಾಗ ಸ್ಥಳೀಯರು ನಿಂತು ಕಾಮಗಾರಿ ಮಾಡಿಸಿಕೊಳ್ಳಬೇಕು. ಸಾಕಷ್ಟು ಅನುದಾನವನ್ನು ಸರ್ಕಾರದಿಂದ ತಂದಿರುವುದರಿಂದ ಗ್ರಾಮಗಳ ರಸ್ತೆಗಳು ಕಾಂಕ್ರೀಟ್ ಮತ್ತು ಡಾಂಬರೀಕರಣವಾಗುತ್ತಿದೆ.ಗ್ರಾಮಗಳಲ್ಲಿ ಹೆಚ್ಚಿನ ಮೂಲಭೂತ ಸೌಲಭ್ಯಗಳು ದೊರೆಯಬೇಕು. ಗ್ರಾಮಗಳು ಅಭಿವೃದ್ಧಿ ಆದರೆ ದೇಶ ಅಭಿವೃದ್ಧಿ ಹೊಂದಲಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಸಂಪರ್ಕಿಸಿ ಪರಿಹಾರ ಮಾಡಿಕೊಳ್ಳಬಹುದು ಎಂದು ಹೇಳಿದರು
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಮತ್ತು ಗುತ್ತಿಗೆದಾರ ಉಪಸ್ಥಿತರಿದ್ದರು.