RNI NO. KARKAN/2006/27779|Friday, October 18, 2024
You are here: Home » breaking news » ಗೋಕಾಕ:ಶಿಕ್ಷಣ ಸಂಸ್ಥೆಗಳು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಉತ್ತಮ ಕ್ರೀಡಾಪಟುಗಳಾಗಿ ರೂಪಿಸುವಲ್ಲಿ ಸಹಕರಿಸಬೇಕು : ಸನತ ಜಾರಕಿಹೊಳಿ

ಗೋಕಾಕ:ಶಿಕ್ಷಣ ಸಂಸ್ಥೆಗಳು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಉತ್ತಮ ಕ್ರೀಡಾಪಟುಗಳಾಗಿ ರೂಪಿಸುವಲ್ಲಿ ಸಹಕರಿಸಬೇಕು : ಸನತ ಜಾರಕಿಹೊಳಿ 

ಶಿಕ್ಷಣ ಸಂಸ್ಥೆಗಳು ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಉತ್ತಮ ಕ್ರೀಡಾಪಟುಗಳಾಗಿ ರೂಪಿಸುವಲ್ಲಿ ಸಹಕರಿಸಬೇಕು : ಸನತ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 12 :

 

ಎಲ್ಲ ಶಿಕ್ಷಣ ಸಂಸ್ಥೆಗಳು ಇಂದಿನ ವಿದ್ಯಾರ್ಥಿಗಳಿಗೆ ,ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ದೇಶದ ಉತ್ತಮ ಕ್ರೀಡಾಪಟುಗಳಾಗಿ ರೂಪಿಸುವಲ್ಲಿ ಸಹಕರಿಸಬೇಕು. ಕ್ರೀಡೆ ವಿದ್ಯಾಭ್ಯಾಸದ ಅವಿಭಾಜ್ಯ ಅಂಗವಾದಾಗ ಮಾತ್ರ ದೇಶವನ್ನು ಕ್ರೀಡೆಯಲ್ಲಿ ಉನ್ನತ ದರ್ಜೆಗೆ ಕೊಂಡೊಯ್ಯಬಹುದು ಎಂದು ಲಕ್ಷ್ಮೀ ಎಜುಕೇಶನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು.

ರವಿವಾರದಂದು ನಗರದ ಎಲ್ಇಟಿ ಶಿಕ್ಷಣ ಸಂಸ್ಥೆಯಲ್ಲಿ ಇಲ್ಲಿನ ಲಕ್ಷ್ಮೀ ಎಜುಕೇಶನ್ ಟ್ರಸ್ಟ್, ಗೋಕಾಕ ತಾಲೂಕಾ ಪ್ರೇಸ್ ಅಸೋಸಿಯೇಷನ್, ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಇವುಗಳ ಸಂಯುಕ್ತಾಶಯದಲ್ಲಿ ಹಮ್ಮಿಕೊಂಡ ತಾಲೂಕಾ ಮಟ್ಟದ ಚೇಸ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಓದಿನಷ್ಟೇ ಪ್ರಾಮುಖ್ಯತೆ ಕ್ರೀಡೆಗೂ ನೀಡಿದರೆ ಹೆಚ್ಚಿನ ಸಾಧನೆ ತೋರಲು ಸಾಧ್ಯ ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮುಂದುವರೆಯಬೇಕು . ಶಾರೀರಿಕ ಮತ್ತು ಮಾನಸಿಕ ಸ್ವಾಸ್ಥ್ಯಕ್ಕೆ ಸಹಕಾರಿಯಾಗಿರುವ ಗ್ರಾಮೀಣ ಕ್ರೀಡೆಗಳ ರಕ್ಷಣೆಗೆ ಯುವ ಸಮುದಾಯ ಮುಂದಾಗಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಬಿಜೆಪಿ ನಗರ ಘಟಕದ ಅಧ್ಯಕ್ಷ ಭೀಮಶಿ ಭರಮನ್ನವರ, ಮಹಾವೀರ ಖಾರೆಪಠಾಣ, ಮನೋಹರ ಮ್ಯಾಗೇರಿ, ಸಂತೋಷ ಖಂಡ್ರಿ, ಬಸವರಾಜ ಬ್ಯಾಡರಟ್ಟಿ ಉಪಸ್ಥಿತರಿದ್ದರು.

Related posts: