RNI NO. KARKAN/2006/27779|Wednesday, November 6, 2024
You are here: Home » breaking news » ಗೋಕಾಕ:ಸಕ್ಕರೆ ಕಾರಖಾನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ : ಸಂತೋಷ ಜಾರಕಿಹೊಳಿ

ಗೋಕಾಕ:ಸಕ್ಕರೆ ಕಾರಖಾನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ : ಸಂತೋಷ ಜಾರಕಿಹೊಳಿ 

ಸಕ್ಕರೆ ಕಾರಖಾನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ : ಸಂತೋಷ ಜಾರಕಿಹೊಳಿ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 9 :

 

ಸಕ್ಕರೆ ಕಾರಖಾನೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರಖಾನೆ ಅಧ್ಯಕ್ಷ ಸಂತೋಷ ರಮೇಶ ಜಾರಕಿಹೊಳಿ ಹೇಳಿದರು.
ಇತ್ತೀಚೆಗೆ ಹೀರೆನಂದಿ ಗ್ರಾಮದ ಸೌಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಪ್ರದೀಪನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೈತರ ಸಹಕಾರದೊಂದಿಗೆ ಸೌಭಾಗ್ಯಲಕ್ಷ್ಮೀ ಶುಗರ್ಸ್ ಪ್ರಗತಿಯತ್ತ ಸಾಗುತ್ತಿದೆ. ಕಾರ್ಖಾನೆಯು ಸ್ಥಾಪನೆಗೊಂಡಾಗಿನಿಂದ , ಸದಾ ಕಾಲ ರೈತರ ಆರ್ಶಿವಾದ ಕಾರ್ಖಾನೆಗೆ ಮೇಲಿದ್ದು , ರೈತರು ಈ ಕಾರ್ಖಾನೆಯನ್ನು ತಮ್ಮದೆಂದು ಭಾವಿಸಿ ತಮ್ಮ ಕಬ್ಬನ್ನು ಪೂರೈಸಿ ತಮ್ಮ ಆರ್ಥಿಕ ಪ್ರಗತಿಯೊಂದಿಗೆ ಕಾರ್ಖಾನೆಯ ಅಭಿವೃದ್ಧಿಗೂ ಶ್ರಮಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಕಾರ್ಖಾನೆಯ ಜನರಲ್ ಮ್ಯಾನೇಜರ್ ಅಧಿಕರಾವ ಪಾಟೀಲ,ಪ್ರಮೋದ ಸಾಬಳೆ, ಬಾಳೇಶ ಶಿಂದಿ ಮರದ ಹಾಗೂ ಕಾರ್ಖಾನೆಯ ಸಿಬ್ಬಂದಿ ಉಪಸ್ಥಿತರಿದ್ದರು.

Related posts: