ಗೋಕಾಕ:ವೀರರಾಣಿ ಕಿತ್ತೂರು ಚನ್ನಮ್ಮ ನಾಡು ಕಂಡ ಹೆಮ್ಮೆಯ ವನಿತೆಯಾಗಿದ್ದಾಳೆ : ಶಾಸಕ ರಮೇಶ
ವೀರರಾಣಿ ಕಿತ್ತೂರು ಚನ್ನಮ್ಮ ನಾಡು ಕಂಡ ಹೆಮ್ಮೆಯ ವನಿತೆಯಾಗಿದ್ದಾಳೆ : ಶಾಸಕ ರಮೇಶ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 23 :
ಆಂಗ್ಲರ ವಿರುದ್ಧ ಹೋರಾಟ ನಡೆಸಿದ ಪ್ರಥಮ ಸ್ವಾತಂತ್ರ್ಯ ಹೋರಾಟದ ವೀರರಾಣಿ ಕಿತ್ತೂರು ಚನ್ನಮ್ಮ ನಾಡು ಕಂಡ ಹೆಮ್ಮೆಯ ವನಿತೆಯಾಗಿದ್ದಾಳೆ. ಅವಳ ಧೈರ್ಯ ಮತ್ತು ಶೌರ್ಯ ಇಂದಿಗೂ ಕನ್ನಡಿಗರಿಗೆ ಸ್ಫೂರ್ತಿಯಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ಶನಿವಾರದಂದು ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಿಳಾ ಮೋರ್ಚಾ ವತಿಯಿಂದ ಹಮ್ಮಿಕೊಂಡ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಚನ್ನಮ್ಮಾಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಚನ್ನಮ್ಮ ಕನ್ನಡಿಗರ ಹೆಮ್ಮಯಾಗಿದ್ದಾಳೆ. ಭಾರತದ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಎಂದೇ ಹೆಸರಾಗಿದ್ದ ವೀರರಾಣಿ ಚನ್ನಮ್ಮ ನಮ್ಮ ನಾಡಿನ ಅಪ್ರತಿಮ ಮಹಿಳಾ ಹೋರಾಟಗಾರ್ತಿ, ಚೆನ್ನಮ್ಮ ಇಂದಿನ ಮಹಿಳೆಯರಿಗೆ ಆದರ್ಶಪ್ರಾಯರಾಗಿದ್ದಾರೆ. ಚನ್ನಮ್ಮಳ ಆದರ್ಶ ಮತ್ತು ದೈರ್ಯವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮನ್ನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಶಾಸಕರ ಸಹಾಯಕ ಸುರೇಶ ಸನದಿ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ, ಈಶ್ವರ ಬಾಗೋಜಿ, ಶಿವಾನಂದ ಹಿರೇಮಠ, ಲಕ್ಷ್ಮೀಕಾಂತ ಎತ್ತಿನಮನಿ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಖಡಕಭಾಂವಿ, ಎಸ್.ಟಿ ಮೋರ್ಚಾ ಅಧ್ಯಕ್ಷ ರವಿ ಮಡ್ಡೆಪ್ಪಗೋಳ, ಲಕ್ಷ್ಮೀ ಪಾಟೀಲ, ಕರುಣಾ ಗರುಡಕರ ಸೇರಿದಂತೆ ಅನೇಕರು ಇದ್ದರು.