RNI NO. KARKAN/2006/27779|Friday, November 22, 2024
You are here: Home » breaking news » ಗೋಕಾಕ:ಜಿಲ್ಲೆಯಾದ್ಯಂತ ಕನ್ನಡ ಪರ ವಾತಾವರಣ ನಿರ್ಮಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು : ಕಸಾಪ ಅಭ್ಯರ್ಥಿ ಖಾನಪ್ಪನವರ

ಗೋಕಾಕ:ಜಿಲ್ಲೆಯಾದ್ಯಂತ ಕನ್ನಡ ಪರ ವಾತಾವರಣ ನಿರ್ಮಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು : ಕಸಾಪ ಅಭ್ಯರ್ಥಿ ಖಾನಪ್ಪನವರ 

ಜಿಲ್ಲೆಯಾದ್ಯಂತ ಕನ್ನಡ ಪರ ವಾತಾವರಣ ನಿರ್ಮಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು : ಕಸಾಪ ಅಭ್ಯರ್ಥಿ ಖಾನಪ್ಪನವರ

 

 

ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ನ 6 :

 
ಜಿಲ್ಲೆಯಾದ್ಯಂತ ಕನ್ನಡ ಪರ ವಾತಾವರಣ ನಿರ್ಮಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕಸಾಪ ಅಭ್ಯರ್ಥಿ ಬಸವರಾಜ ಖಾನಪ್ಪನವರ ಹೇಳಿದರು.

ಶುಕ್ರವಾರದಂದು ನಗರದಲ್ಲಿಯ ಹಲವು ಬಡಾವಣೆಗಳಲ್ಲಿ ಕಸಾಪ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡಿ ಅವರು ಮಾತನಾಡಿದರು.

ಕನ್ನಡ ಭಾಷೆ ಅನ್ನದ ಭಾಷೆಯಾಗಬೇಕು ಆ ನಿಟ್ಟಿನಲ್ಲಿ ಕಸಾಪದಿಂದ ಹಲವಾರು ಯೋಜನೆ ಮತ್ತು ಯೋಚನೆಗಳನ್ನು ಹಮ್ಮಿಕೊಂಡಿದ್ದು, ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರೆ ಅವುಗಳನ್ನು ಅನುಷ್ಠಾನಕ್ಕೆ ತರಲಾಗುವುದು. ಯುವ ಸಾಹಿತಿಗಳು ಕಡೆಗಣಿಸುವ ಪ್ರವೃತ್ತಿಗೆ ಬ್ರೇಕ್ ಹಾಕಿ ಅವರನ್ನು ಮುಖ್ಯವಾಹಿನಿಗೆ ತರಲು ಪ್ರತಿ ಮೂರು ತಿಂಗಳಿಗೊಮ್ಮೆ ಯುವ ಸಾಹಿತಿಗಳ ಚಿಂತನ ಮಂಥನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು‌. ಸಾಹಿತಿಗಳು ಬರೆಯುವ ಪುಸ್ತಕಗಳನ್ನು ಕಸಾಪದಿಂದ ಪ್ರಕಟಿಸಲು ಕ್ರಮ ಕೈಗೊಳ್ಳಲಾಗುವದು ಇಂಥ ಹತ್ತು ಹಲವು ಯೋಜನೆಗಳನ್ನು ಹಮ್ಮಿಕೊಂಡಿದ್ದು, ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಸಹಕಾರದಿಂದ ಅವುಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಮಹಾಲಿಂಗ ಮಂಗಿ, ಸಾದಿಕ ಹಲ್ಯಾಳ, ಸಂತೋಷ ಖಂಡ್ರಿ , ಮುಗುಟ ಪೈಲವಾನ, ಯಾಸೀನ ಮುಲ್ಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: