RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡು ಪಕ್ಷವನ್ನು ಬೆಳಸಬೇಕು : ಸಂಜಯ ಪಾಟೀಲ

ಗೋಕಾಕ:ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡು ಪಕ್ಷವನ್ನು ಬೆಳಸಬೇಕು : ಸಂಜಯ ಪಾಟೀಲ 

ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡು ಪಕ್ಷವನ್ನು ಬೆಳಸಬೇಕು : ಸಂಜಯ ಪಾಟೀಲ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 13 :

 
ಪಕ್ಷ ನೀಡಿದ ಜವಾಬ್ದಾರಿಗಳನ್ನು ಮೂರು ವರ್ಷದ ಅವಧಿಗಳೊಳಗಾಗಿ ಸಮರ್ಥವಾಗಿ ನಿಭಾಯಿಸಿ, ದೇಶ ಕಟ್ಟುವ ಕಾರ್ಯ ಹಾಗೂ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡು ಪಕ್ಷವನ್ನು ಬೆಳಸಬೇಕು ಎಂದು ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಹೇಳಿದರು.
ಅವರು, ಶನಿವಾರದಂದು ನಗರದ ಬಿಜೆಪಿ ಕಾರ್ಯಾಲಯದಲ್ಲಿ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನಪ್ರೀಯ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾರ್ಯದ ಜೊತೆ ಜೊತೆಗೆ ಬೂತ ಮಟ್ಟದಲ್ಲಿ ಕಾರ್ಯಕರ್ತರು ಸಭೆಗಳನ್ನು ನಡೆಸಿ, ಕೋವಿಡ್ ಲಸಿಕೆ ಪಡೆಯದವರಿಗೆ ಲಸಿಕೆ ಪಡೆಯುವಂತೆ ಮನವೊಲಿಸಬೇಕು ಎಂದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಬಸವರಾಜ ಬೊಮ್ಮಾಯಿ ನೇತ್ರತ್ವದ ಸರಕಾರದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡುವ ಮೂಲಕ ಬಿಜೆಪಿ ಪಕ್ಷಕ್ಕೆ ಅವರ ಮತಗಳನ್ನು ಸೆಳೆಯಲು ಪ್ರಯತ್ನಿಸಬೇಕು ಎಂದರು.
ಬೆಳಗಾವಿ ವಿಭಾಗ ಸಹ ಸಂಘಟನಾ ಪ್ರಭಾರಿ ಜಯಪ್ರಕಾಶ ಸಂಘಟನಾತ್ಮಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಪ್ರಾಸ್ಥಾವಿಕವಾಗಿ ಮಾತನಾಡಿದರು.
ಸಭೆಯ ನಂತರ ನಗರದ ವಿವಿಧ ಬೂತ ಮಟ್ಟದ ಅಧ್ಯಕ್ಷರ ಮನೆಗಳಿಗೆ ಬಿಜೆಪಿ ನಾಮಫಲಕಗಳನ್ನು ಅಳವಡಿಸುವ ಕಾರ್ಯಕ್ರಮಕ್ಕೆ ಸಂಸದೆ ಮಂಗಲಾ ಅಂಗಡಿ ಹಾಗೂ ಬಿಜೆಪಿ ಬೆಳಗಾವಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ ಜಂಟಿಯಾಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಂದೀಪ ದೇಶಪಾಂಡೆ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಶಾಮಾನಂದ ಪೂಜೇರಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರೇಮಾ ಭಂಡಾರಿ, ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಶಫೀಕ ಜಮಾದಾರ, ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ ಸೇರಿದಂತೆ ಬಿಜೆಪಿಯ ವಿವಿಧ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

Related posts: