RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಲಸಿಕೆ ಅತ್ಯಂತ ಮುಖ್ಯವಾಗಿದೆ : ಶಾಸಕ ರಮೇಶ ಸಲಹೆ

ಗೋಕಾಕ:ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಲಸಿಕೆ ಅತ್ಯಂತ ಮುಖ್ಯವಾಗಿದೆ : ಶಾಸಕ ರಮೇಶ ಸಲಹೆ 

ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಲಸಿಕೆ ಅತ್ಯಂತ ಮುಖ್ಯವಾಗಿದೆ : ಶಾಸಕ ರಮೇಶ ಸಲಹೆ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 3 :

 

ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು ಲಸಿಕೆ ಅತ್ಯಂತ ಮುಖ್ಯವಾಗಿದ್ದು, ಮಕ್ಕಳಿಗಾಗಿ ಈಗಾಗಲೇ ಆರೋಗ್ಯ ಇಲಾಖೆ ಎರಡು ಲಸಿಕೆಗಳನ್ನು ಸಿದ್ಧಪಡಿಸಿದ್ದು, ಸರಕಾರದ ನಿಯಮದಂತೆ ಎಲ್ಲರೂ ಲಸಿಕೆ ಪಡೆದು ಕೊರೋನಾ ಓಡಿಸಿ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಸೋಮವಾರದಂದು ನಗರದ ಮಯೂರ ಶಾಲಾಯಲ್ಲಿ ಆರೋಗ್ಯ ಇಲಾಖೆ ಮತ್ತು ಶಿಕ್ಷಣ ಇಲಾಖೆ ಹಮ್ಮಿಕೊಂಡ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮೂರನೇ ಅಲೆಯ ಸೂಚನೆ ಇರುವುದರಿಂದ ಕೇಂದ್ರ ಸರಕಾರ ಮಕ್ಕಳಿಗೆ ಲಸಿಕೆ ನೀಡಲು ಮುಂದಾಗಿದೆ. ಇದೊಂದು ಉತ್ತಮ ಕಾರ್ಯವಾಗಿದೆ. ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳಬೇಕು” ಮಕ್ಕಳು ಭಯಭೀತರಾಗದೆ ಲಸಿಕೆಯನ್ನು ಪಡೆದುಕೊಳ್ಳಬೇಕು. ಎಂದು ಹೇಳಿದರು .

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸ್ಥಾಯಿ ಸಮಿತಿ ಚೇರಮನ ಕೆ.ಎಂ.ಗೋಕಾಕ, ತಹಶೀಲ್ದಾರ ಪ್ರಕಾಶ ಹೋಳೆಪ್ಪಗೋಳ , ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ತಾಲೂಕಾ ವೈದ್ಯಾಧಿಕಾರಿ ಡಾ. ರವೀಂದ್ರ ಅಂಟಿನ, ಪೌರಾಯುಕ್ತ ಶಿವಾನಂದ ಹಿರೇಮಠ, ಆಯುಷ್ಯ ವೈದ್ಯಾಧಿಕಾರಿ ಡಾ.ದೀಪಾ ತುಬಾಕಿ, ನಗರಸಭೆ ಸದಸ್ಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Related posts: