RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ಸ್ವರ್ಧಾತ್ಮಕ ಯುಗದಲ್ಲಿ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳಿವೆ : ಜಯಾನಂದ

ಗೋಕಾಕ:ಸ್ವರ್ಧಾತ್ಮಕ ಯುಗದಲ್ಲಿ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳಿವೆ : ಜಯಾನಂದ 

ಸ್ವರ್ಧಾತ್ಮಕ ಯುಗದಲ್ಲಿ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳಿವೆ : ಜಯಾನಂದ

 
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 18 :

 
ಯುವಶಕ್ತಿ ಸ್ವಾಮಿ ವಿವೇಕಾನಂದರ ಆದರ್ಶಗಳ ಪ್ರೇರಣೆಯಿಂದ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರ ಪಡೆಯುವಂತೆ ಕೆಎಲ್ಇ ನಿರ್ದೇಶಕ ಜಯಾನಂದ ಮುನ್ನೋಳಿ ಹೇಳಿದರು.
ಮಂಗಳವಾರದಂದು ನಗರದ ಕೆಎಲ್ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿ ಪೂರ್ವ ಮಹಾವಿದ್ಯಾಲ ಯದವರು ಸ್ವಾಮಿ ವಿವೇಕಾನಂದ ಜಯಂತಿ ನಿಮಿತ್ತ ತಾಲೂಕಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸಾಮಾನ್ಯ ಜ್ಞಾನ ಸ್ವರ್ದೇಯ ಚೈತನ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳಿವೆ. ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ತಮ್ಮ ಜ್ಞಾನಮಟ್ಟವನ್ನು ಹೆಚ್ಚಿಸಿಕೊಳ್ಳಿ. ಕೆಎಲ್ಇ ಸಂಸ್ಥೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕೆಎಲ್ಇ ಸಂಸ್ಥೆಗಳ ಸಮಿತಿ ಅಧ್ಯಕ್ಷ ಎಂ.ಡಿ ಚುನಮರಿ, ಆಡಳಿತಾಧಿಕಾರಿ ಜಿ.ಎಂ ಅಂದಾನಿ, ಪ್ರಾಚಾರ್ಯ ಕೆ.ಬಿ. ಮೆವುಂಡಿ ಸೇರಿದಂತೆ ಅನೇಕರು ಇದ್ದರು.

Related posts: