ಬೆಳಗಾವಿ:ಕೋವಿಡ್ ನಿಯಮ ಉಲ್ಲಂಘನೆ : ಶಾಸಕ ಅನಿಲ್ ಬೆನಕೆ ವಿರುದ್ಧ ಎಫ್ ಐಆರ್ ದಾಖಲು
ಕೋವಿಡ್ ನಿಯಮ ಉಲ್ಲಂಘನೆ : ಶಾಸಕ ಅನಿಲ್ ಬೆನಕೆ ವಿರುದ್ಧ ಎಫ್ ಐಆರ್ ದಾಖಲು
ನಮ್ಮ ಬೆಳಗಾವಿ ಇ – ವಾರ್ತೆ, ಬೆಳಗಾವಿ ಜ 20 :
ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಜನಾಕ್ರೋಶಕ್ಕೆ ಕಾರಣವಾಗಿದ್ದ ಶಾಸಕ ಅನಿಲ್ ಬೆನಕೆ ವಿರುದ್ಧ ಇದೀಗ ಎಫ್ ಐಆರ್ ದಾಖಲಾಗಿದೆ.
ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘನೆ ಮಾಡಿ ಶಾಸಕ ಅನಿಲ್ ಬೆನಕೆ ಎಮ್ಮೆ ಓಡಿಸುವ ಸ್ಪರ್ಧೆ, ಧರ್ಮವೀರ ಸಂಭಾಜಿ ಪಟ್ಟಾಭಿಷೇಕ ಕಾರ್ಯಕ್ರಮ ಆಯೋಜಿಸಿದ್ದರು. ಕೋವಿಡ್ ವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಜನಜಾತ್ರೆಗೆ ಕಾರಣರಾಗಿದ್ದರು. ರಾಜ್ಯ ಸರ್ಕಾರ ಜಾರಿ ಮಾಡಿರುವ ನಿಯಮಗಳನ್ನು ಸ್ವತ: ಬಿಜೆಪಿ ಜನಪ್ರತಿನಿಧಿಗಳೇ ಉಲ್ಲಂಘನೆ ಮಾಡುತ್ತಿರುವ ಬಗ್ಗೆ ಜನಾಕ್ರೋಶ ವ್ಯಕ್ತವಾಗಿತ್ತು.
ಕರ್ಫ್ಯೂ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಇದೀಗ ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆಯಡಿ ಬೆಳಗಾವಿ ಪೊಲೀಸರು ಶಾಸಕ ಅನಿಲ್ ಬೆನಕೆ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.