RNI NO. KARKAN/2006/27779|Monday, December 23, 2024
You are here: Home » breaking news » ಗೋಕಾಕ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ತರ ಪಾತ್ರ ವಹಿಸಿವೆ : ಕೆ.ಬಿ.ಬಿರಾದಾರ ಪಾಟೀಲ

ಗೋಕಾಕ:ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ತರ ಪಾತ್ರ ವಹಿಸಿವೆ : ಕೆ.ಬಿ.ಬಿರಾದಾರ ಪಾಟೀಲ 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ತರ ಪಾತ್ರ ವಹಿಸಿವೆ : ಕೆ.ಬಿ.ಬಿರಾದಾರ ಪಾಟೀಲ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜ 25 :

 
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಮಹತ್ತರ ಪಾತ್ರ ವಹಿಸುತ್ತಿದ್ದು, ಸಂವಿಧಾನ ನೀಡಿದ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಮತದಾರರು ತಮ್ಮ ಕರ್ತವ್ಯ ಮಾಡುವಂತೆ ಇಲ್ಲಿನ ಎಸ್.ಎಲ್.ಜೆ ಕಾಲೇಜಿನ ಉಪನ್ಯಾಸಕ ಕೆ.ಬಿ.ಬಿರಾದಾರ ಪಾಟೀಲ ಹೇಳಿದರು.

ಮಂಗಳವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಮೂಲಭೂತ ಕರ್ತವ್ಯಗಳ ಪಾತ್ರ ಕುರಿತು ವಿಶೇಷ ಉಪನ್ಯಾಸ ನೀಡುತ್ತಾ ಅವರು ಮಾತನಾಡಿದರು.
ದೇಶದ 18 ವರ್ಷ ತುಂಬಿದ ಎಲ್ಲಾ ಪ್ರಜೆಗಳಿಗೂ ಮತದಾನದ ಹಕ್ಕನ್ನು ಕಲ್ಪಿಸಲಾಗಿದೆ. ಅದನ್ನು ಚುನಾವಣೆಗಳಲ್ಲಿ ಚಲಾಯಿಸಿ ಒಳ್ಳೆಯ ಜನಪ್ರತಿನಿಧಿಗಳನ್ನು ಆರಿಸಿ ದೇಶದ ಅಭಿವೃದ್ಧಿಗೆ ಸಹಕರಿಸವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಚಾರ್ಯ ಐ.ಎಸ್.ಪವಾರ, ಉಪನ್ಯಾಸಕಿ ಭಾಗ್ಯಶ್ರಿ ಗುಡ್ಡದಮನಿ, ವಿದ್ಯಾರ್ಥಿ ಪ್ರತಿನಿಧಿ ಮಂಜುನಾಥ್ ಸುಣ್ಣದೋಳಿ,ಮಹಾಬೂಬಸಾಬ ಬಾಗವಾನ ಉಪಸ್ಥಿತರಿದ್ದರು .

Related posts: