ಗೋಕಾಕ:ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬೆಂಗಾವಲು ಕಾರಿನ ಮೇಲೆ ಗುಂಡಿನ ದಾಳಿ ಖಂಡಿಸಿ ಪ್ರತಿಭಟನೆ
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬೆಂಗಾವಲು ಕಾರಿನ ಮೇಲೆ ಗುಂಡಿನ ದಾಳಿ ಖಂಡಿಸಿ ಪ್ರತಿಭಟನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 7 :
ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬೆಂಗಾವಲು ಕಾರಿನ ಮೇಲೆ ಗುಂಡಿನ ದಾಳಿ ಖಂಡಿಸಿ ಇಲ್ಲಿನ ಎಐಎಂಐಎಂ ಪಕ್ಷದ ಕಾರ್ಯಕರ್ತರು ಸೋಮವಾರದಂದು ನಗರದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಅರ್ಪಿಸಿದರು.
ಉತ್ತರ ಪ್ರದೇಶದ ಕಿಥೌರ್ನಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೆಹಲಿಗೆ ತೆರಳುತ್ತಿದ್ದ ವೇಳೆ ಛಜರ್ಸಿ ಟೋಲ್ ಪ್ಲಾಜಾ ಬಳಿ ದುಷ್ಕರ್ಮಿಗಳು ಓವೈಸಿ ಕಾರಿನ ಮೇಲೆ 3-4 ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಲು ಮುಂದಾಗಿರುವುದು ಖಂಡನೀಯವಾಗಿದೆ. ಗುಂಡು ಹಾರಿಸಿದ ಆರೋಪಿಗಳಾದ ಸಚಿನ್ ಮತ್ತು ಸುಭಾಮರ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಏಕೆ ಪ್ರಕರಣ ದಾಖಲಿಸಿ ಕೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಮನವಿಯಲ್ಲಿ ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ಎಐಎಂಐಎಂ ಕಾರ್ಯಕರ್ತರಾದ ಫಯಾಜ್ ಅಹ್ಮದ್ ಅವಟಿ, ಮಹ್ಮದಗೌಸ ಜಮಾದಾರ, ಮೆಹಬೂಬ್ ತಲವಾರ, ಅಬ್ಬಿದುಲ್ಲಾ ಅವಟಿ,ಯೂಸುಫ್ ಬೇಫಾರಿ, ಆಸೀಫ ಮುಲ್ಲಾ, ಮೌಲಾನಾ ಆಸೀಫ ಶಾಬಾಶಖಾನ,ಅರ್ಬಾಜ್ ದಫೇದಾರ,ಜಾವೇದ ಮುಜಾವರ, ಮೋಹಿನಿ ಪಟೇಲ್,ಯಾಸೀನ್ ಪೈಲವಾನ ಉಪಸ್ಥಿತರಿದ್ದರು.