ಗೋಕಾಕ:ಫೆ 27ಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-2025 ನೇ ಸಾಲಿನ ಜಿಲ್ಲಾ ಘಟಕದ ಚುನಾವಣೆ : ಜಿಲ್ಲಾ ಚುನಾವಣಾಧಿಕಾರಿ ಪೂಜೇರಿ ಮಾಹಿತಿ
ಫೆ 27ಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-2025 ನೇ ಸಾಲಿನ ಜಿಲ್ಲಾ ಘಟಕದ ಚುನಾವಣೆ : ಜಿಲ್ಲಾ ಚುನಾವಣಾಧಿಕಾರಿ ಪೂಜೇರಿ ಮಾಹಿತಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 8 :
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022-2025 ನೇ ಸಾಲಿನ ಜಿಲ್ಲಾ ಘಟಕದ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುಸಿದಪ್ಪ ಪೂಜೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು 2022ರ ಫೆ-7ರಂದು ಅರ್ಹ ಮತದಾರರ ಪಟ್ಟಿಯ ಪೂರ್ವಭಾವಿ ಪ್ರಕಟಣೆ, ಫೆ.9ರಂದು ಮತದಾರರ ಪಟ್ಟಿಯಲ್ಲಿನ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನ, ಫೆ.11 ಮಧ್ಯಾಹ್ನ 12 ಗಂಟೆಗೆ ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾಗಲಿದೆ ಹಾಗೂ ನಾಮಪತ್ರಗಳ ಸಲ್ಲಿಕೆ ಆರಂಭವಾಗಲಿದೆ. ಫೆ.14ರ ಸೋಮವಾರ ಮಧ್ಯಾಹ್ನ 3 ಗಂಟೆಯ ವರೆಗೆ ನಾಮಪತ್ರಗಳ ಸಲ್ಲಿಕೆಯ ಕೊನೆಯ ದಿನವಾಗಿದೆ. ಫೆ.16ರ ಬುಧವಾರ ಮಧ್ಯಾಹ್ನ 1 ಗಂಟೆಯ ನಂತರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಹಾಗೂ ಕ್ರಮಬದ್ದ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆಯಾಗಲಿದೆ, ಫೆ.19ರ ಶನಿವಾರ ಮಧ್ಯಾಹ್ನ 1 ಗಂಟೆಯೊಳಗೆ ನಾಮಪತ್ರಗಳನ್ನು ವಾಪಸ್ ಪಡೆಯುವ ಕೊನೆಯ ದಿನವಾಗಿರುತ್ತದೆ. ಫೆ.19ರ ಮಧ್ಯಾಹ್ನ 2 ಗಂಟೆಯ ನಂತರ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ.
ಅಗತ್ಯವಿದ್ದಲ್ಲೀ ಫೆ.27ರ ಭಾನುವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಚುನಾವಣೆ ನಡೆಯಲಿದೆ, ಅದೇ ದಿನ ಮಧ್ಯಾಹ್ನ 3.30ರ ನಂತರ ಮತಗಳ ಏಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ. ಫೆ.28ರ ಸೋಮವಾರ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವ ದಿನವಾಗಿದೆ. ಈ ಚುನಾವಣಾ ಪ್ರಕ್ರಿಯೆಗಳು ನಗರದಲ್ಲಿರುವ ಸಂಘದ ಕಛೇರಿಯಲ್ಲಿ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ಚುನಾವಣಾಧಿಕಾರಿ ಗುರುಸಿದಪ್ಪ ಪೂಜೇರಿ ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ