RNI NO. KARKAN/2006/27779|Wednesday, November 6, 2024
You are here: Home » breaking news » ಗೋಕಾಕ:ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನ

ಗೋಕಾಕ:ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನ 

ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 15 :

 

ಮೂಡಲಗಿ ತಾಲೂಕಿನ ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಮತ್ತು ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡ ಹೊಸ ಸದಸ್ಯರುಗಳನ್ನು ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅಭಿನಂದಿಸಲಾಯಿತು.
ಮಂಗಳವಾರದಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸಿನ ಮೇರೆಗೆ ಪಟ್ಟಣ ಪಂಚಾಯತಿಗಳು ಹಾಗೂ ಮೂಡಲಗಿ ಪುರಸಭೆಗೆ ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದು ಅವರನ್ನು ಕ್ಷೇತ್ರದ ಮುಖಂಡರು ಸತ್ಕರಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಮಾತನಾಡಿ, ಸರ್ಕಾರವು ಅರಭಾವಿ, ಕಲ್ಲೋಳಿ, ನಾಗನೂರ ಪಟ್ಟಣ ಪಂಚಾಯತಿ ಹಾಗೂ ಮೂಡಲಗಿ ಪುರಸಭೆಗೆ ನಿಷ್ಠಾವಂತ ಕಾರ್ಯಕರ್ತರನ್ನು ಗುರುತಿಸಿ, ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಶಿಫಾರಸ್ಸಿನನ್ವಯ ಈ ನೇಮಕಾತಿ ನಡೆದಿದೆ ಎಂದು ಹೇಳಿದರು.
ನಾಮನಿರ್ದೇಶಿತ ಸದಸ್ಯರು : ಅರಭಾವಿ ಪಟ್ಟಣ ಪಂಚಾಯತಿಗೆ ಆನಂದ ಕಲ್ಲಪ್ಪ ವಗ್ಗರ, ಭಾಗ್ಯಶ್ರೀ ಕಾಶಪ್ಪ ಕೋಳಿ, ಕೃಷ್ಣಾ ಯಶವಂತ ಬಂಡಿವಡ್ಡರ, ಕಲ್ಲೋಳಿ ಪಟ್ಟಣ ಪಂಚಾಯತಿಗೆ ಲಕ್ಷ್ಮಣ ಸಣ್ಣಬೀರಪ್ಪ ಮರಡಿ, ಅಶೋಕ ಬಾಳಪ್ಪ ಮಕ್ಕಳಗೇರಿ, ಶಾಂತವ್ವ ಬಸಪ್ಪ ಗೋಕಾವಿ, ನಾಗನೂರ ಪಟ್ಟಣ ಪಂಚಾಯತಿಗೆ ಕಮಲಾದೇವಿ ಸತ್ತೆಪ್ಪ ಬಡಗಾವಿ, ಪಾಂಡಪ್ಪ ವೆಂಕಪ್ಪ ನಾಯ್ಕ, ಬಲವಂತ ಕಾಶಪ್ಪ ಕರಬನ್ನವರ ಮತ್ತು ಮೂಡಲಗಿ ಪುರಸಭೆಗೆ ಸಿದ್ದಪ್ಪ ಪವಾಡೆಪ್ಪ ಮಗದುಮ್ಮ, ಪಾಂಡುರಂಗ ಸದಾಶಿವ ಮಹೇಂದ್ರಕರ, ಶಾಬವ್ವ ಮಾರುತಿ ಪಾಟೀಲ, ಹಣಮಂತ ಲಕ್ಕಪ್ಪ ಪೂಜೇರಿ ಮತ್ತು ಪ್ರಕಾಶ ರೇವಪ್ಪ ಮಾದರ ಅವರನ್ನು ಸರ್ಕಾರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದೆ.
ಈ ಸಂದರ್ಭದಲ್ಲಿ ಅರಭಾವಿ ಮಂಡಲ ಬಿಜೆಪಿ ಅಧ್ಯಕ್ಷ ಮಹಾದೇವ ಶೆಕ್ಕಿ, ಶಾಸಕರ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ಅರಭಾವಿ, ಕಲ್ಲೋಳಿ, ನಾಗನೂರ, ಮೂಡಲಗಿ ಪಟ್ಟಣಗಳ ಮುಖಂಡರುಗಳು, ಸಹಕಾರಿಗಳು ಉಪಸ್ಥಿತರಿದ್ದರು.

ಸರ್ಕಾರ ಅರಭಾವಿ, ಕಲ್ಲೋಳಿ, ನಾಗನೂರ ಮತ್ತು ಮೂಡಲಗಿ ಪುರಸಭೆಗೆ ನಿಷ್ಠಾವಂತ ಕಾರ್ಯಕರ್ತರನ್ನು ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿದೆ. ಅದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳೀನಕುಮಾರ ಕಟೀಲ, ಪೌರಾಡಳಿತ ಸಚಿವ ಎಂ.ಟಿ.ಬಿ. ನಾಗರಾಜ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಮನ್ನಣೆ ನೀಡುವ ಮೂಲಕ ಜನತೆಯ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ನಡೆಯಬೇಕು. ಇದಕ್ಕಾಗಿ ಸರ್ಕಾರದಿಂದ ಅಗತ್ಯ ನೆರವು ನೀಡಲು ಸಿದ್ಧನಿದ್ದೇನೆ.
ಬಾಲಚಂದ್ರ ಜಾರಕಿಹೊಳಿ, ಶಾಸಕರು ಹಾಗೂ ಕೆಎಂಎಫ್ ಅಧ್ಯಕ್ಷರು.

Related posts: