ಗೋಕಾಕ:5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ : ಡಾ.ಎಂ.ಎಸ್.ಕೊಪ್ಪದ
5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸಿ : ಡಾ.ಎಂ.ಎಸ್.ಕೊಪ್ಪದ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಫೆ 26 :
ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮತ್ತು ರೋಟರಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ದಿ.27 ರಂದು ನಡೆಯುವ ಫಲ್ಸ್ ಪೋಲಿಯೋ ಕಾರ್ಯಕ್ರಮದ ನಿಮಿತ್ತ ಶನಿವಾರದಂದು ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ತಾಲೂಕು ವೈದ್ಯಾಧಿಕಾರಿ ಡಾ.ಎಂ.ಎಸ್.ಕೊಪ್ಪದ ಮಾತನಾಡಿ ತಾಲೂಕಿನಲ್ಲಿ 322 ಫಲ್ಸ್ ಪೋಲೀಯೋ ಬೂತ್ ಗಳನ್ನು ಸ್ಥಾಪಿಸಲಾಗಿದ್ದು, ಪಾಲಕರು ತಮ್ಮ 5 ವರ್ಷದ ಒಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಿಸುವಂತೆ ಕೋರಿದರು.
ಈ ಜಾಥಾವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಫಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸಿತು.
ಈ ಸಂದರ್ಭದಲ್ಲಿ ಡಾ.ಬಿ.ಎ ಬಾಗಲಕೋಟೆ, ಡಾ.ದೀಪಾ ತುಬಾಕಿ, ಎಂ.ಎಲ್.ನಾಯಿಕ, ಬಿ.ಸಿ.ಚಂದರಗಿ, ರೋಟರಿ ಸಂಸ್ಥೆಯ ಅಧ್ಯಕ್ಷ ರಾಜು ವರದಾಯಿ, ಸೋಮಶೇಖರ್ ಮಗದುಮ್ಮ, ಮಹಾಂತೇಶ ತಾವಂಶಿ, ಮಲ್ಲಿಕಾರ್ಜುನ ಈಟಿ, ದಿಲೀಪ್ ಮೆಳವಂಕಿ, ಉದಯ ಹುಕ್ಕೇರಿ, ಸುರೇಶ್ ರಾಠೋಡ, ಕೆಎಲ್ಇ ಶಾಲೆಯ ಸ್ಕೌಟ್ಸ್ ಆಂಡ್ ಗೈಡ್ಸ್ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.