RNI NO. KARKAN/2006/27779|Wednesday, November 6, 2024
You are here: Home » breaking news » ಗೋಕಾಕ:ಶರಣ ಸಂಸ್ಕೃತಿ ಉತ್ಸವದ ನಿಮಿತ್ತ ಶ್ರೀಮಠದ ಗದ್ದುಗೆಗೆ ಅಭಿಷೇಕ ಹಾಗೂ ಬಿಲ್ವಾರ್ಚನೆ

ಗೋಕಾಕ:ಶರಣ ಸಂಸ್ಕೃತಿ ಉತ್ಸವದ ನಿಮಿತ್ತ ಶ್ರೀಮಠದ ಗದ್ದುಗೆಗೆ ಅಭಿಷೇಕ ಹಾಗೂ ಬಿಲ್ವಾರ್ಚನೆ 

ಶರಣ ಸಂಸ್ಕೃತಿ ಉತ್ಸವದ ನಿಮಿತ್ತ ಶ್ರೀಮಠದ ಗದ್ದುಗೆಗೆ ಅಭಿಷೇಕ ಹಾಗೂ ಬಿಲ್ವಾರ್ಚನೆ

 
ನಮ್ಮ ಬೆಳಗಾವಿ ಇ – ವಾರ್ತೆ , ಗೋಕಾಕ ‌ಮಾ 6 :

 
ನಗರದ ಶೂನ್ಯ ಸಂಪಾದನ ಮಠದ ಲಿಂಗೈಕ್ಯ ಶ್ರೀ ಬಸವ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ಹಮ್ಮಿಕೊಂಡ 17ನೇ ಶರಣ ಸಂಸ್ಕೃತಿ ಉತ್ಸವದ ನಿಮಿತ್ತ ರವಿವಾರದಂದು ಮುಂಜಾನೆ ಶ್ರೀಮಠದ ಗದ್ದುಗೆಗೆ ಅಭಿಷೇಕ ಹಾಗೂ ಬಿಲ್ವಾರ್ಚನೆಯನ್ನು ಮಾಡಲಾಯಿತು.
ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಂತರ ನಗರದ ಪ್ರಮುಖ ಬೀದಿಗಳಲ್ಲಿ ವಚನ ತಾಡೋಲೆ ಪ್ರತಿಗಳ ಹಾಗೂ ವಿಶ್ವಗುರು ಬಸವಣ್ಣನವರ ಭಾವಚಿತ್ರ ಕುಂಬಮೇಳ ಹಾಗೂ ವಿವಿಧ ವಾದ್ಯಗಳೊಂದಿಗೆ ಪಲ್ಲಕ್ಕಿ ಉತ್ಸವವು ಜರಗಿತು.

ಈ ಸಂದರ್ಭದಲ್ಲಿ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು, ಬಟಕುರ್ಕಿ ಮಠದ ಬಸವಲಿಂಗ ಮಹಾಸ್ವಾಮಿಗಳು, ನಾರಾಯಣ ಶರಣರು, ಉತ್ಸವ ‌ಸಮಿತಿಯ ಅಧ್ಯಕ್ಷ ಚೆನ್ನಬಸಪ್ಪ ವಾಲಿ, ಕಾರ್ಯದರ್ಶಿ ಶಂಕರ ಗೋರೋಶಿ, ಬಸನಗೌಡ ಪಾಟೀಲ, ಈಶ್ವರ ಬಾಗೋಜಿ, ಲಿಂಗಾಯತ ಜಾಗೃತ ಮಹಿಳಾ ವೇದಿಕೆಯ ಅಧ್ಯಕ್ಷೆ ಸುಮಿತ್ರಾ ಗುರಾಣಿ ಸೇರಿದಂತೆ ಅನೇಕರು ಇದ್ದರು.

Related posts: