RNI NO. KARKAN/2006/27779|Friday, November 22, 2024
You are here: Home » breaking news » ಮೂಡಲಗಿ:ಕ್ಷೇತ್ರದ 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಬಿಡುಗಡೆ : ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ಕ್ಷೇತ್ರದ 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಬಿಡುಗಡೆ : ಬಾಲಚಂದ್ರ ಜಾರಕಿಹೊಳಿ 

ಕ್ಷೇತ್ರದ 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಬಿಡುಗಡೆ : ಬಾಲಚಂದ್ರ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಮೂಡಲಗಿ ಮಾ 19 :
ಕ್ಷೇತ್ರದ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಮುಜರಾಯಿ ಇಲಾಖೆಯಿಂದ 2 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದ್ದು, ಕೂಡಲೇ ಅವುಗಳನ್ನು ಅಭಿವೃದ್ಧಿಗೊಳಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ತಾಲೂಕಿನ ವಡೇರಹಟ್ಟಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಜರುಗಿದ ಆಯಾ ಗ್ರಾಮದ ದೇವಸ್ಥಾನಗಳ ಕಮೀಟಿ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಒಟ್ಟು 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ ಈಗಾಗಲೇ ಬಂದಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಕಾಳಜಿಯಿಂದ ನಮ್ಮ ಕ್ಷೇತ್ರಕ್ಕೆ ರಸ್ತೆಗಳ ಸುಧಾರಣೆ ಮತ್ತು ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ 52 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಹದಗೆಟ್ಟಿರುವ ರಸ್ತೆಗಳ ಅಭಿವೃದ್ಧಿಗಾಗಿ ಈ ಅನುದಾನ ಬಂದಿದೆ. ಜೊತೆಗೆ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳು ಸಹ ನಡೆಯಲಿವೆ. ಕ್ಷೇತ್ರಕ್ಕೆ 52 ಕೋಟಿ ರೂ. ವಿಶೇಷ ಅನುದಾನ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಮಸ್ತ ಜನರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಅನುದಾನದ ವಿವರ : ವಡೇರಹಟ್ಟಿ ಯಲ್ಲಮ್ಮದೇವಿ ದೇವಸ್ಥಾನಕ್ಕೆ 10 ಲಕ್ಷ ರೂ, ಹಳ್ಳೂರ ಮಹಾಲಕ್ಷ್ಮೀ ದೇವಸ್ಥಾನಕ್ಕೆ 15 ಲಕ್ಷ ರೂ, ಕಲಾರಕೊಪ್ಪ ಚಾಮುಂಡೇಶ್ವರಿ ದೇವಸ್ಥಾನಕ್ಕೆ 15 ಲಕ್ಷ ರೂ, ಫುಲಗಡ್ಡಿ ಮರಡಿಸಿದ್ಧೇಶ್ವರ ದೇವಸ್ಥಾನಕ್ಕೆ 10 ಲಕ್ಷ ರೂ, ಯಾದವಾಡ ಹನಮಂತ ದೇವಸ್ಥಾನಕ್ಕೆ 10 ಲಕ್ಷ ರೂ, ಪಟಗುಂದಿ ಭಾಗೀರಥಿ ದೇವಸ್ಥಾನಕ್ಕೆ 5 ಲಕ್ಷ ರೂ, ಮನ್ನಿಕೇರಿ ಲಕ್ಷ್ಮೀದೇವಿ ದೇವಸ್ಥಾನಕ್ಕೆ 5 ಲಕ್ಷ ರೂ, ಫುಲಗಡ್ಡಿ ಹನಮಂತ ದೇವಸ್ಥಾನಕ್ಕೆ 15 ಲಕ್ಷ ರೂ, ನಲ್ಲಾನಟ್ಟಿ ಲಕ್ಷ್ಮೀದೇವಿ ದೇವಸ್ಥಾನಕ್ಕೆ 10 ಲಕ್ಷ ರೂ, ಹುಣಶ್ಯಾಳ ಪಿವಾಯ್ ಅಂಬಿಗರ ಚೌಡಯ್ಯ ದೇವಸ್ಥಾನಕ್ಕೆ 10 ಲಕ್ಷ ರೂ, ಮೂಡಲಗಿ ಸಾಯಿ ಮಂದಿರಕ್ಕೆ 10 ಲಕ್ಷ ರೂ, ಅರಭಾವಿ ಫಾರ್ಮಮರಡಿ ಭಗೀರಥ ದೇವಸ್ಥಾನಕ್ಕೆ 5 ಲಕ್ಷ ರೂ, ಮಸಗುಪ್ಪಿ ಭಗೀರಥ ದೇವಸ್ಥಾನಕ್ಕೆ 5 ಲಕ್ಷ ರೂ, ಅರಭಾವಿ ಹಟ್ಟಿಗುಡ್ಡ-ಮಾನೆಪ್ಪಗೋಳ ತೋಟದ ಹನಮಂತ ದೇವಸ್ಥಾನಕ್ಕೆ 5 ಲಕ್ಷ ರೂ, ಹಳ್ಳೂರ ಬೀರಸಿದ್ಧೇಶ್ವರ ದೇವಸ್ಥಾನಕ್ಕೆ 5 ಲಕ್ಷ ರೂ, ಯಾದವಾಡ ಹಡಪದ ಅಪ್ಪಣ್ಣ ದೇವಸ್ಥಾನಕ್ಕೆ 5 ಲಕ್ಷ ರೂ, ಅಡಿಬಟ್ಟಿ ಹನಮಂತ ದೇವಸ್ಥಾನಕ್ಕೆ 10 ಲಕ್ಷ ರೂ, ರಾಜಾಪೂರ ಯಲ್ಲಮ್ಮದೇವಿ ದೇವಸ್ಥಾನಕ್ಕೆ 10 ಲಕ್ಷ ರೂ, ಮಸಗುಪ್ಪಿ ದುರ್ಗಾದೇವಿ ದೇವಸ್ಥಾನಕ್ಕೆ 5 ಲಕ್ಷ ರೂ, ತಳಕಟ್ನಾಳ ರೇವಣಸಿದ್ಧೇಶ್ವರ ದೇವಸ್ಥಾನಕ್ಕೆ 10 ಲಕ್ಷ ರೂ, ತಪಸಿ ಕಮಲಾದೇವಿ ದೇವಸ್ಥಾನಕ್ಕೆ 15 ಲಕ್ಷ ರೂ ಮತ್ತು ಯಾದವಾಡ ವಿಠ್ಠಲ ಮತ್ತು ಸಾಯಿ ಮಂದಿರಕ್ಕೆ 10 ಲಕ್ಷ ರೂ. ಸೇರಿದಂತೆ ಒಟ್ಟು 22 ದೇವಸ್ಥಾನಗಳ ಅಭಿವೃದ್ಧಿಗಾಗಿ 2 ಕೋಟಿ ರೂ, ಅನುದಾನ ಬಿಡುಗಡೆಯಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಮಲ್ಲು ಪಾಟೀಲ, ನ್ಯಾಯವಾದಿ ಮುತ್ತೆಪ್ಪ ಕುಳ್ಳೂರ, ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಸಂತೋಷ ಸೋನವಾಲ್ಕರ, ಜಿಪಂ ಮಾಜಿ ಸದಸ್ಯ ಭೀಮಶಿ ಮಗದುಮ್ಮ, ಹನಮಂತ ತೇರದಾಳ, ಮುರಳಿ ವಜ್ರಮಟ್ಟಿ, ಬನಪ್ಪ ವಡೇರ, ವಿಠ್ಠಲ ಗಿಡೋಜಿ, ಅಡಿವೆಪ್ಪ ಹಾದಿಮನಿ, ಚಂದ್ರು ಮೋಟೆಪ್ಪಗೋಳ, ಲಕ್ಷ್ಮಣ ಮಸಗುಪ್ಪಿ, ಗೋಪಾಲ ಕುದರಿ, ಹಾಗೂ ದೇವಸ್ಥಾನಗಳ ಕಮೀಟಿ ಪ್ರಮುಖರು ಉಪಸ್ಥಿತರಿದ್ದರು.

Related posts: