ಗೋಕಾಕ :ಬೆಟಗೇರಿಯಲ್ಲಿ ಶಾಂತಿಯುತವಾಗಿ ನಡೆದ ಮೊದಲ ದಿನದ ಎಸ್.ಎಸ್.ಎಲ್.ಸಿ ಪರೀಕ್ಷೆ
ಬೆಟಗೇರಿಯಲ್ಲಿ ಶಾಂತಿಯುತವಾಗಿ ನಡೆದ ಮೊದಲ ದಿನದ ಎಸ್.ಎಸ್.ಎಲ್.ಸಿ ಪರೀಕ್ಷೆ
ನಮ್ಮ ಬೆಳಗಾವಿ ಇ – ವಾರ್ತೆ, ಬೆಟಗೇರಿ ಮಾ 28 :
ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿ.ವಿ.ದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಜರುಗುತ್ತಿರುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಸೋಮವಾರದಂದು ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ನಡೆಯಿತು.
ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 14 ಪರೀಕ್ಷಾ ಕೊಠಡಿ, 16 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ, ಓರ್ವ ಕಸ್ಟೊಡಿಯನ್, ಒಬ್ಬರು ಪರೀಕ್ಷಾ ಕೇಂದ್ರದ ಸಹಾಯಕ ಕಾರ್ಯನಿರ್ವಹಿಸಿದರು.
ಇಲ್ಲಿಯ ಪರೀಕ್ಷಾ ಕೇಂದ್ರದಲ್ಲಿ ಒಟ್ಟು 265 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. ಇಲ್ಲಿಯ ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಕಲಂ ನೀಷೆದಾಜ್ಞೆ ಜಾರಿಗೊಳಿಸಲಾಗಿ ನಕಲು ನಡೆಯದಂತೆ ಸಿಸಿ ಕ್ಯಾಮರಾ ಹಾಗೂ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು ಎಂದು ಸ್ಥಳೀಯ ಪರೀಕ್ಷಾ ಕೇಂದ್ರದ ಮುಖ್ಯಸ್ಥ ರಮೇಶ ಅಳಗುಂಡಿ ತಿಳಿಸಿದರು.