ಗೋಕಾಕ:ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕ : ಮಾಜಿ ಸಚಿವ ರಮೇಶ ಜಾರಕಿಹೊಳಿ
ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕ : ಮಾಜಿ ಸಚಿವ ರಮೇಶ ಜಾರಕಿಹೊಳಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 14 :
ಡಾ. ಬಿ. ಆರ್. ಅಂಬೇಡ್ಕರ್ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಮಾಜಿ ಸಚಿವ ಹಾಗು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಹಮ್ಮಿಕೊಂಡ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ ನಮ್ಮ ಹೆಮ್ಮೆಯ ಸಂವಿಧಾನ ಶಿಲ್ಪಿ. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ. ಛಲ ಸಾಧನೆಯ ಮೂಲಕ ಭವ್ಯ ಭಾರತದ ಕನಸು ಕಾಣುತ್ತಾ ಕಷ್ಟದ ನಡುವೆಯೂ ಬೆಳೆದ ಅಂಬೇಡ್ಕರ್ ಅವರು ನಮ್ಮ ದೇಶದ ಅದ್ಭುತ ನಾಯಕರಲ್ಲಿ ಒಬ್ಬರಾಗಿ ರೂಪುಗೊಂಡರು. ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪ್ರೇರಣೆ ಅಂಬೇಡ್ಕರ್ ಎಂದರು.
ಎಲ್ಲರನ್ನು ಸಮಾನವಾಗಿ ಕಾಣುವ ಸಮಾಜದ ನಿರ್ಮಾಣಕ್ಕಾಗಿ ಅವಿರತವಾಗಿ ಶ್ರಮಿಸಿದವರು ಅಂಬೇಡ್ಕರ್. ಶೋಷಿತರು, ಕಾರ್ಮಿಕರು, ಮಹಿಳೆಯರ ಉನ್ನತಿಗೆ ಹೋರಾಡಿದ, ಅಸಹಾಯಕರ ಧ್ವನಿಯಾದ, ಸಮಾನತೆಯ ಕನಸು ಕಂಡ, ಎಲ್ಲರ ಬದುಕಿಗೆ ಸ್ಫೂರ್ತಿಯಾದ ಮಹಾನ್ ನಾಯಕ ಡಾ. ಬಿ. ಆರ್. ಅಂಬೇಡ್ಕರ್ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಉಪಾಧ್ಯಕ್ಷ ಬಸವರಾಜ ಆರೇನ್ನವರ, ಸದಸ್ಯರಾದ ಅಬ್ಬಾಸ ದೇಸಾಯಿ, ಸಿದ್ದಪ್ಪ ಹುಚ್ಚರಾಮಪ್ಪಗೋಳ, ಹರೀಶ ಬೂದಿಹಾಳ, ಬಾಬು ಮುಳಗುಂದ, ತಾಯವ್ವ ಸೋನೊನಿ, ಬಿಜೆಪಿ ಪದಾಧಿಕಾರಿಗಳಾದ ಲಕ್ಷ್ಮಣ ತಪಸಿ, ಬಸವರಾಜ ಹಿರೇಮಠ, ಲಕ್ಕಪ್ಪ ತಹಶೀಲದಾರ, ಸದರಜೋಶಿ, ರಾಜೇಶ್ವರಿ ಒಡೆಯರ, ಮಂಜುನಾಥ ಮಾವರಕರ, ಮಲ್ಲಿಕಜಾನ ತಳವಾರ, ಸುರೇಶ ಪತ್ತಾರ, ಶ್ರೀರಂಗ ನಾಯ್ಕ, ಕಿರಣ ಡಮಾಮಗರ, ಪವನ ಮಹಾಲಿಂಗಪೂರ, ಬಸವರಾಜ ಮೇತ್ರಿ, ಗೋವಿಂದ ಕಳ್ಳಿಮನಿ, ರವಿ ಕಡಕೋಳ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.