ಗೋಕಾಕ:ಸಂವಿಧಾನ ಶಿಲ್ಪಿ. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ : ಕಸಾಪ ಅಧ್ಯಕ್ಷ ಗುರುರಾಜ ಲೂತಿ
ಸಂವಿಧಾನ ಶಿಲ್ಪಿ. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ : ಕಸಾಪ ಅಧ್ಯಕ್ಷ ಗುರುರಾಜ ಲೂತಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಏ 14 :
ಡಾ. ಬಿ. ಆರ್. ಅಂಬೇಡ್ಕರ್. ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರು. ನಮ್ಮ ದೇಶದ ಪ್ರತಿಯೊಬ್ಬರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾ ಸಾಹೇಬ್ ಅಂಬೇಡ್ಕರ್. ಸಮಾನತೆ, ಪ್ರಗತಿಯ ಕನಸು ಕಂಡ ಮೇರು ನಾಯಕ, ಸಂವಿಧಾನ ಶಿಲ್ಪಿ. ಅಂಬೇಡ್ಕರ್ ಅವರ ಬದುಕು ಎಲ್ಲರಿಗೂ ಸ್ಫೂರ್ತಿ. ಇವರ ಆದರ್ಶ ಎಲ್ಲರ ಜೀವನಕ್ಕೆ ದಾರಿ ದೀಪವಾಗಿದೆ ಎಂದು ಬೀಳಗಿಯ ಕಸಾಪ ಅಧ್ಯಕ್ಷ ಗುರುರಾಜ ಲೂತಿ ಹೇಳಿದರು.
ಗುರುವಾರದಂದು ತಾಲೂಕಾಡಳಿತ , ನಗರಸಭೆ , ತಾಪಂ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಸಮುದಾಯ ಭವನದಲ್ಲಿ ಹಮ್ಮಿಕೊಂಡ 131 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಬಾಬಾಸಾಹೇಬರು ಗಟ್ಟಿಯಾದ ಸಂವಿಧಾನ ಬರೆಯುವ ಮೂಲಕ ಪ್ರಜಾಪ್ರಭುತ್ವಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ಸಂವಿಧಾನದ ಮೂಲಕವೇ ಸರ್ವರಿಗೂ ಸಮಾನತೆ ಹಾಗೂ ಸ್ವಾತಂತ್ರ್ಯ ಕೊಟ್ಟಿದ್ದಾರೆ. ಅವರು ಆಧುನಿಕ ಭಾರತದ ಪಿತಾಮಹ’ ರಾಗಿದ್ದಾರೆ.ಅಂಬೇಡ್ಕರ್ ಶೋಷಿತರಿಗೆ ಹಾಗೂ ಸಾಮಾಜಿಕವಾಗಿ ತುಳಿತಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಟ್ಟಿದ್ದಾರೆ. ಅವರು ಬರೆದ ಸಂವಿಧಾನ ವಿಶ್ವದಲ್ಲೇ ಶ್ರೇಷ್ಠವಾಗಿದೆ.
ಅಸ್ಪೃಶ್ಯತೆಯನ್ನು ಮೆಟ್ಟು ನಿಂತು ಹೋರಾಡಿ ಜನರಿಗೆ ನ್ಯಾಯ ಒದಗಿಸಿದ ಮಹಾನ ನಾಯಕ ಅಂಬೇಡ್ಕರ್. ಅವರು ಹಾಕಿಕೊಟ್ಟ ದಾರಿಯಲ್ಲಿ ನಾವಿಂದು ಬದುಕಿ ತಮ್ಮ ಬದುಕನ್ನು ಪಾವನ ಗೊಳಿಸಕೊಳ್ಳಬೇಕು. ಡಾ.ಬಿ.ಆರ್.ಅಂಬೇಡ್ಕರ್ ಮಹಾನ ನಾಯಕರಾಗಿ ನಮ್ಮ ಮುಂದೆ ನಿಂತಿದ್ದಾರೆ.ಭಾರತವು ಇಂದು ಜಗತ್ತಿಗೆ ಸೂಪರ ಪಾವರ ರಾಷ್ಟ್ರವಾಗಿ ಹೊರಹೊಮ್ಮುತ್ತಿರುವ ಹಿಂದನ ಶಕ್ತಿಯೇ ಡಾ.ಬಿ.ಆರ್.ಅಂಬೇಡ್ಕರ್ ನವರ ಚಿಂತನೆಗಳು ಅವರ ಚಿಂತನೆಗಳನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ನಾವೆಲ್ಲರೂ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷೆತೆಯನ್ನು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ವಹಿಸಿದ್ದರು.
ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ನಾರಿ ಪ್ರಶಸ್ತಿ ಪಡೆದ ಶೋಭ ಗಸ್ತಿ ಅವರನ್ನು ಸತ್ಕರಿಸಿ ,ಗೌರವಿಸಲಾಯಿತು.
ವೇದಿಕೆಯ ಮೇಲೆ ಪೌರಾಯುಕ್ತ ಶಿವಾನಂದ ಹಿರೇಮಠ, ಸಮಾಜ ಕಲ್ಯಾಣ ಅಧಿಕಾರಿ ಎಸ್.ವ್ಹಿ ಕಲ್ಲಪ್ಪನವರ, ತಾಪಂ ಅಧಿಕಾರಿ ಮುರಳಿಧರ ದೇಶಪಾಂಡೆ, ಪಿಎಸ್ಐ ಕೆ.ವಾಲಿಕರ, ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ನಗರಸಭೆ ಉಪಾಧ್ಯಕ್ಷ ಬಸವರಾಜ ಆರೆನ್ನವರ , ಬಿ.ಇ.ಒ ಜಿ.ಬಿ.ಬಳಗಾರ, ಮುಖಂಡರಾದ ಬಾಳೇಶ ಸಂತವ್ವಗೋಳ, ಗೋವಿಂದ ಕಳ್ಳಿಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.