ಗೋಕಾಕ:ಬಸವ ಜಯಂತಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ
ಬಸವ ಜಯಂತಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಮೇ 4 :
ನಗರದ ಕಿಲ್ಲಾದಲ್ಲಿರುವ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಬಸವ ಜಯಂತಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಮಂಗಳವಾರದಂದು ಮುಂಜಾನೆ ಶ್ರೀ ಬಸವೇಶ್ವರ ಮೂರ್ತಿಗೆ ರುದ್ರಾಭಿಷೇಕ, ನಾಮಕರಣ ಹಾಗೂ ಮುತೈದಿಯರಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿದವು. ಜಯಂತಿಯ ನಿಮಿತ್ತ ಹಮ್ಮಿಕೊಂಡ ವಿವಿಧ ಸ್ವರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಂಜೆ 5 ಘಂಟೆಗೆ ಬಸವೇಶ್ವರ ಭಾವಚಿತ್ರದೊಂದಿಗೆ ವಿವಿಧ ವಾಧ್ಯಮೇಳಗಳು ಹಾಗೂ ಜೋಡೆತ್ತುಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಉತ್ಸವವನ್ನು ನಡೆಸಲಾಯಿತು.
ಈ ಕಾರ್ಯಕ್ರಮದಲ್ಲಿ ನಗರದ ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು, ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಅಶೋಕ ಪೂಜಾರಿ, ಸೋಮಶೇಖರ್ ಮಗದುಮ್ಮ, ಮಹಾಂತೇಶ ತಾವಂಶಿ, ಅಶೋಕ ಹೆಗ್ಗನವರ, ರಾಘವೇಂದ್ರ ಹತ್ತರಕಿ, ಬಾಳೇಶ ಹತ್ತರಕಿ ಸೇರಿದಂತೆ ಅನೇಕರು ಇದ್ದರು.