RNI NO. KARKAN/2006/27779|Friday, November 22, 2024
You are here: Home » breaking news » ಘಟಪ್ರಭಾ: ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ: ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 

ನಮ್ಮದು ವಿವಿಧತೆಯಲ್ಲಿ ಏಕತೆ ಸಾರುವ ರಾಷ್ಟ್ರ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಘಟಪ್ರಭಾ ಮೇ 16 :

 

ಪ್ರಾಚೀನ ಕಾಲದಿಂದಲೂ ನಾವು ದೈವ ಭಕ್ತರು. ದೇವರನ್ನು ನಂಬಿ ಬದುಕುತ್ತಿರುವವರು. ದೇವರಿಂದಲೇ ಈ ಜಗತ್ತು ನಡೆದಿದೆ. ದೇಶವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವುದರಿಂದ ನಮ್ಮದು ಜಾತ್ಯಾತೀತ ರಾಷ್ಟ್ರವೆಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸೋಮವಾರ ಸಂಜೆ ಸಮೀಪದ ಗಣೇಶವಾಡಿ ಗ್ರಾಮದ ಲಕ್ಷ್ಮೀದೇವಿ ದೇವಸ್ಥಾನದ 25 ನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರು ದೇವರ ಮೇಲೆ ಶ್ರದ್ಧೆ, ಭಕ್ತಿಯನ್ನು ಇಟ್ಟುಕೊಂಡು ನಿರಂತರವಾಗಿ ದೇವರ ಸ್ಮರಣೆಯಲ್ಲಿ ಇರುತ್ತಾರೆ. ತಮ್ಮ ಕಷ್ಠ-ಕಾರ್ಪಣ್ಯಗಳನ್ನು ದೇವರಲ್ಲಿ ಮೊರೆ ಹೋಗುತ್ತಾರೆಂದು ತಿಳಿಸಿದರು.
ಗಣೇಶವಾಡಿ ಗ್ರಾಮಸ್ಥರು ಮೊದಲಿನಿಂದಲೂ ನಮ್ಮ ಕುಟುಂಬದ ಬಗ್ಗೆ ಅಪಾರ ಅಭಿಮಾನ ಇಟ್ಟುಕೊಂಡವರು. ನಮಗೆ ಪ್ರತಿ ಹಂತದಲ್ಲೂ ಬೆನ್ನೆಲಬಾಗಿ ನಿಂತವರು. ಕಳೆದ ಎರಡು ದಶಕಗಳಿಂದ ಈ ಕ್ಷೇತ್ರದ ಜನರೊಂದಿಗೆ ನಿಕಟ ಬಾಂಧವ್ಯವನ್ನಿಟ್ಟುಕೊಂಡು 18 ವರ್ಷಗಳಿಂದ ಈ ಭಾಗದ ಪ್ರತಿನಿಧಿಯಾಗಿ ಗಣೇಶವಾಡಿ ಗ್ರಾಮದ ಅಭಿವೃದ್ಧಿಗೆ ಸರ್ಕಾರದ ಹಲವಾರು ಜನೋಪಯೋಗಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಗ್ರಾಮಸ್ಥರ ಒಗ್ಗಟ್ಟಿನ ಸಂಘಟನೆಯಿಂದಾಗಿ ಸರ್ಕಾರದ ಯೋಜನೆಗಳನ್ನು ಗ್ರಾಮಸ್ಥರು ಸದ್ಬಳಕೆ ಮಾಡಿಕೊಂಡಿದ್ದು, ಲಕ್ಷ್ಮೀದೇವಿಯ ಕೃಪೆಯಿಂದ ಎಲ್ಲರಿಗೂ ಒಳ್ಳೆಯದಾಗಲಿ. ಮಳೆ-ಬೆಳೆ ಚೆನ್ನಾಗಿ ಬಂದು ಸಮೃದ್ಧಿ ಹೊಂದಲಿ ಎಂದು ಅವರು ಆಶಿಸಿದರು.
ಬೆಳ್ಳಿ ಮಹೋತ್ಸವದ ಸಂಭ್ರಮದಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವಿಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಬೆಂಗಳೂರು ಸಹಕಾರ ಮಾರಾಟ ಮಹಾಮಂಡಳಿ ಉಪಾಧ್ಯಕ್ಷ ಬಸಗೌಡ ಪಾಟೀಲ(ನಾಗನೂರ), ಯುವ ನಾಯಕ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ಪ್ರಭಾಶುಗರ ಅಧ್ಯಕ್ಷ ಅಶೋಕ ಪಾಟೀಲ, ಪ್ರಭಾಶುಗರ ನಿರ್ದೇಶಕರಾದ ಬಸಗೌಡ ಪಾಟೀಲ(ಕಲ್ಲೋಳಿ), ಲಕ್ಷ್ಮಣ ಗಣಪ್ಪಗೋಳ, ಶಿವಲಿಂಗ ಪೂಜೇರಿ, ಮಾಳಪ್ಪ ಜಾಗನೂರ, ಎಪಿಎಂಸಿ ಮಾಜಿ ಅಧ್ಯಕ್ಷ ಶ್ರೀಪತಿ ಗಣೇಶವಾಡಿ, ಮದನ ದೇಶಪಾಂಡೆ, ನ್ಯಾಯವಾದಿ ಸುರೇಶ ಜಾಧವ, ಅರಭಾವಿ ಪಿಕೆಪಿಎಸ್ ಅಧ್ಯಕ್ಷ ಹಣಮಂತ ಚಿಪ್ಪಲಕಟ್ಟಿ, ಕೆಂಚಪ್ಪ ಪಾಟೀಲ, ಹಣಮಂತ ಜಾಧವ, ಬಸವರಾಜ ಮಾಳ್ಯಾಗೋಳ, ಬಾಳಪ್ಪ ಗಣೇಶವಾಡಿ, ಗ್ರಾಪಂ ಅಧ್ಯಕ್ಷೆ ಯಲ್ಲವ್ವ ತಳವಾರ, ಬಾಳೇಶ ಜಾಧವ, ಮಹಾದೇವ ತುಕ್ಕಾನಟ್ಟಿ, ಸಿದ್ರಾಮ ಮೂಲಿಮನಿ, ಗ್ರಾಮ ಪಂಚಾಯತ ಸದಸ್ಯರು, ಸುತ್ತಮುತ್ತಲಿನ ಪ್ರಮುಖರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ ಹಾಗೂ ಸರ್ವೋತ್ತಮ ಜಾರಕಿಹೊಳಿ ಅವರನ್ನು ಗ್ರಾಮಸ್ಥರು ಸತ್ಕರಿಸಿದರು.

Related posts: