ಬೈಲಹೊಂಗಲ:ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ : ಎ.ಸಿ.ಎಫ್. ಎಂ.ಕೆ ಪಾತ್ರೋಟ
ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ : ಎ.ಸಿ.ಎಫ್. ಎಂ.ಕೆ ಪಾತ್ರೋಟ
ನಮ್ಮ ಬೆಳಗಾವಿ ಇ – ವಾರ್ತೆ, ಬೈಲಹೊಂಗಲ ಜೂ 5 :
ಪರಿಸರ ರಕ್ಷಿಸುವದು ಪ್ರತಿಯೊಬ್ಬ ಮಾನವನ ಜವಾಬ್ದಾರಿಯಾಗಿದ್ದು, ಜನರಲ್ಲಿ ಇದರ ಬಗ್ಗೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಬೇಕಾಗಿದೆ ಎಂದು ಸಮಾಜಿಕ ಅರಣ್ಯ ವಿಭಾಗದ ಎಸಿಎಫ್ ಮಾರುತಿ ಪಾತ್ರೋಟ ಹೇಳಿದರು.
ರವಿವಾರದಂದು ಪಟ್ಟಣದ ನಯಾನಗರ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಹಮ್ಮಿಕೊಂಡ ಸಸಿ ನಡೆದು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಾನವನ ದುರಾಸೆಯಿಂದ ಪರಿಸರ ಹಾಳಾಗುತ್ತಿದ್ದು, ಇದು ಮಾನವನಿಂದಲೇ ಸರಿಯಾಗಬೇಕಿದೆ. ಮುಂದಿನ ಪೀಳಿಗೆಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸದಿದ್ದರೆ ಮುಂದೆ ಹೆಚ್ಚಿನ ಅಪಾಯ ಎದುರಾಗಲಿದೆ ಇದನ್ನು ತಡೆಯಲು ಪ್ರತಿಯೊಬ್ಬರೂ ಸಂಕಲ್ಪ ತೊಟ್ಟು ನಿರಂತರ ಪರಿಸರ ಉಳಿಸಿ ಬೆಳೆಸಲು ಮುಂದಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷ ನಾರಾಯಣ ನಲವಡೆ,ಗ್ರಾಮ ಪಂಚಾಯಿತಿ ಸದಸ್ಯರಾದ ಉಮೇಶ ಹುಲಮನಿ,ರವಿ ಹುಡೇದ, ಎನ್.ಆರ್. ಮಾಳಣನವರ, ಆರ್.ಎಫ್.ಓ ಸುರೇಶ ದೊಡ್ಡಬಸನ್ನವರ ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶ್ರೀಕಾಂತಗೌಡ ಪಾಟೀಲ ಉಪಸ್ಥಿತರಿದ್ದರು.