ಗೋಕಾಕ:ಪ್ರಜ್ಞಾವಂತ ಮತದಾರರು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿ : ನಳಿನ್ ಕುಮಾರ್ ಕಟೀಲ್
ಪ್ರಜ್ಞಾವಂತ ಮತದಾರರು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಿ : ನಳಿನ್ ಕುಮಾರ್ ಕಟೀಲ್
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 7 :
ಪ್ರಜ್ಞಾವಂತ ಮತದಾರರು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವಂತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದರು.
ಮಂಗಳವಾರದಂದು ಭಾರತೀಯ ಜನತಾ ಪಾರ್ಟ ನಗರ ಮತ್ತು ಗ್ರಾಮೀಣ ಮಂಡಳ ವತಿಯಿಂದ ಹಮ್ಮಿಕೊಂಡ ವಾಯವ್ಯ ಶಿಕ್ಷಕರ ಮತ್ತು ಪದವಿಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೇಂದ್ರದಲ್ಲಿ ನರೇಂದ್ರ ಮೋದಿಯವರ ಆಡಳಿತದ ಮೂಲಕ ಜಗತ್ತೇ ಗುರುತಿಸುವ ಸ್ಥಾನಕ್ಕೆ ಭಾರತ ಏರಿದೆ. ವಿಧಾನಪರಿಷತ್ತಿನ ಎಲ್ಲ ನಾಲ್ಕು ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ವಿಶ್ವಾಸ ವ್ಯಕ್ತಪಡಿಸಿದರು.ಬಿಜೆಪಿ ಸರಕಾರ ರಾಜ್ಯದಲ್ಲಿ ಶಿಕ್ಷಕರ ಪರವಾಗಿ ಧ್ವನಿ ಎತ್ತಿ ಶಿಕ್ಷಕರ ಬೆಂಬಲಕ್ಕೆ ನಿಂತಿದೆ. ಶಿಕ್ಷಣದಲ್ಲಿ ಕ್ರಾಂತಿಕಾರಿ ಬದಲಾವಣೆ ಮಾಡಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದ ಮೋದಲ ಸರಕಾರ ನಮ್ಮ ಬೊಮ್ಮಾಯಿ ಸರಕಾರ. ರಾಜ್ಯದ ಎಲ್ಲಾ ಕಡೆ ಭಾರತೀಯ ಜನತಾ ಪಕ್ಷದ ಪರವಾಗಿ ವಾತಾವರಣ ಇದೆ.ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಮತ್ತು ವಿಧಾನ ಪರಿಷತನಲ್ಲಿ ಸ್ವಷ್ಟ ಬಹುಮತಕ್ಕಾಗಿ ಈ ಚುನಾವಣೆಯಲ್ಲಿ ಬಿಜೆಪಿಯ ಅರುಣ ಶಹಾಪುರ ಹಾಗೂ ಹಣುಮಂತ ನಿರಾಣಿ ಅವರನ್ನು ಬೆಂಬಲಿಸಬೇಕು.
ಶಿಕ್ಷಕರ ಮತ್ತು ಪದವಿಧರ ರಕ್ಷಣೆ ಮಾಡಲು ಬಿಜೆಪಿ ಸರಕಾರ ಬದ್ದವಿದ್ದು, ಶಿಕ್ಷಕರಿಗೆ ಪ್ರಾತಿನಿಧ್ಯ ನೀಡುವ ನಿಟ್ಟಿನಲ್ಲಿ ಬಿಜೆಪಿ ಸರಕಾರ ಎಲ್ಲಾ ರೀತಿಯ ಕಾರ್ಯ ಮಾಡುತ್ತಿದ್ದೆ. ಜೆಡಿಎಸ್ ನ ಬಸವರಾಜ ಹೊರಟ್ಟಿ ಅವರು ಜನತಾ ಪಾರ್ಟಿಯ ಬದ್ದತೆಯನ್ನು ನೋಡಿ ಪಕ್ಷಕ್ಕೆ ಬಂದು 8ನೇ ಬಾರಿ ಚುನಾವಣೆ ಎದುರಿಸಿದ್ದಾರೆ. ಆ ಕ್ಷೇತ್ರ ಸೇರಿ ಇನ್ನೂಳಿದ 3 ವಿಧಾನ ಪರಿಷತ್ ಸ್ಥಾನಗಳನ್ನು ಈ ಬಿಜೆಪಿ ಗೆಲುವದು ನಿಶ್ಚಿತ. ಆ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯ ಮಾಡಬೇಕು ಎಂದು ಹೇಳಿದರು. ದೇಶದಲ್ಲಿ ಅತ್ಯಂತ ಹೆಚ್ಚಿನ ಗೌರವಕ್ಕೆ ಪಾತ್ರವಾಗಿರುವ ಶಿಕ್ಷಕರು ಅಂತಹ ವಿಧ್ಯಾವಂತರು ಬಿಜೆಪಿಗೆ ಬೆಂಬಲಸಿ, ಅರುಣ ಶಾಹಪೂರ ಮತ್ತು ಹಣುಮಂತ ನಿರಾಣಿ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತದಾರರಲ್ಲಿ ಮನವಿ ಮಾಡಿದರು.
ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಗ ನಾಯಕ , ಎಸ್ ಕೇಶವ ಪ್ರಸಾದ್ , ಸಂಸದೆ ಮಂಗಳಾ ಅಂಗಡಿ , ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಮಾತನಾಡಿ ಪದವಿಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿ ಪಕ್ಷವನ್ನು ಬಲಪಡಿಸಬೇಕು ಎಂದು ಮನವಿ ಮಾಡಿದರು.
ವೇದಿಕೆಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಶಾಸಕ ಎಂ.ಎಲ್.ಮುತ್ತೆನ್ನವರ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಬಿಜೆಪಿ ಪಕ್ಷದ ಮುಖಂಡರುಗಳಾದ ಸುಭಾಷ್ ಪಾಟೀಲ, ಭೀಮಶಿ ಭರಮನ್ನವರ, ಜಯಾನಂದ ಮುನ್ನವಳ್ಳಿ, ಎಲ್.ಟಿ ತಪಸಿ, ರಾಜೇಂದ್ರ ಗೌಡಪ್ಪಗೋಳ, ರಾಜೇಶ್ವರಿ ಒಡಯರ, ಬಸವರಾಜ ಹಿರೇಮಠ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.