ಗೋಕಾಕ:ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಮಹೇಶ್ ಕೋಣಿ ನೇಮಕ
ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಡಾ. ಮಹೇಶ್ ಕೋಣಿ ನೇಮಕ
ನಮ್ಮ ಬೆಳಗಾವಿ ಇ – ವಾರ್ತೆ ಗೋಕಾಕ ಜೂ 8 :
ಪ್ರಸ್ತುತ ಗೋಕಾಕ ನಗರದ ಸರಕಾರಿ ಆಸ್ಪತ್ರೆ ಹಿರಿಯ ವೈದ್ಯ ಹೃದಯ ರೋಗ ತಜ್ಞ ಡಾ. ಮಹೇಶ್ ಕೋಣಿ ಅವರನ್ನು ಬೆಳಗಾವಿ ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ (ಡಿಎಚ್ಓ) ನೇಮಕ ಮಾಡಲಾಗಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿಕಾಂತ ಮುನ್ಯಾಳ ಅವರ ಜಾಗಕ್ಕೆ ಈ ವರ್ಗಾವಣೆ ಮಾಡಲಾಗಿದ್ದು, ಜೂ 10 ರಂದು ಡಾ. ಮಹೇಶ್ ಕೋಣಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ