ಗೋಕಾಕ:ವಿಪ ಚುನಾವಣೆ ; ಮತಗಟ್ಟೆಗೆ ತಹಶೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ ಭೇಟಿ ಪರಿಶೀಲನೆ
ವಿಪ ಚುನಾವಣೆ ; ಮತಗಟ್ಟೆಗೆ ತಹಶೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ ಭೇಟಿ ಪರಿಶೀಲನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 13 :
ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಪ್ರೌಢ ಶಾಲಾ ವಿಭಾಗದಲ್ಲಿ ಮತದಾನ ಪ್ರಾರಂಭವಾಗಿದೆ, ಮತದಾನ ಕೇಂದ್ರಕ್ಕೆ ತಹಶೀಲ್ದಾರ್ ಪ್ರಕಾಶ್ ಹೊಳೆಪ್ಪಗೋಳ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಧಾನ ಪರಿಷತ್ ನ ವಾಯುವ್ಯ ಪದವಿಧರ ಹಾಗೂ ಶಿಕ್ಷಕರ ಕ್ರೇತ್ರಗಳ ಚುನಾವಣೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ತಮ್ಮ ಹಕ್ಕು ಚಲಾಯಿಸಲು ಇಲ್ಲಿನ ಸರಕಾರಿ ಪದವಿಪೂರ್ವ ಶಾಲೆಯಲ್ಲಿ ಸ್ಥಾಪಿಸಲಾದ ಎರಡು ಮತಗಟ್ಟೆಗಳಲ್ಲಿ ಬೆಳ್ಳಗೆಯಿಂದಲೆ ಮತದಾರರು ಉತ್ಸಾಹದಿಂದ ಬಂದು ಮತದಾನ ಮಾಡುತ್ತಿದ್ದಾರೆ.
ಬೆಳಗಾವಿಯಲ್ಲಿ 95, ಬಾಗಲಕೋಟೆಯಲ್ಲಿ 48, ವಿಜಯಪುರದಲ್ಲಿ 47 ಸೇರಿದಂತೆ ಒಟ್ಟು 190 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಶಿಕ್ಷಕರ ಕ್ಷೇತ್ರದಲ್ಲಿ 25,388 ಹಾಗೂ ಪದವಿಧರ ಕ್ಷೇತ್ರದಲ್ಲಿ 95,598 ಮತದಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ.
ತೀವ್ರ ಕುತೂಹಲ ಮೂಡಿಸಿರುವ ವಾಯುವ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆಯ ಮತದಾನ ಆರಂಭವಾಗಿದ್ದು, ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ಪ್ರೌಢ ಶಾಲಾ ವಿಭಾಗದಲ್ಲಿ 603 ಶಿಕ್ಷಕರು ಹಾಗೂ 2259 ಪದವಿದರರು ಮತದಾರರು ಇದ್ದಾರೆ.ಗೋಕಾಕ ತಾಲೂಕಿನ ಒಟ್ಟು ಒಂಬತ್ತು ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಮತದಾನದ ಹಿನ್ನೆಲೆಯಲ್ಲಿ ಭದ್ರತಾ ದೃಷ್ಠಿಯಿಂದ ಮತ ಕೇಂದ್ರಗಳಲ್ಲಿ ಸಿಸಿಟಿವಿ ಸೇರಿದಂತೆ, ಪೋಲಿಸ್ ಇಲಾಖೆ ವತಿಯಿಂದ ಹೆಚ್ಚುವರಿ ಪೋಲಿಸ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.