RNI NO. KARKAN/2006/27779|Sunday, December 22, 2024
You are here: Home » breaking news » ಗೋಕಾಕ:ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ

ಗೋಕಾಕ:ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ 

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಚಾಲನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜೂ 22 :
ತಾಲೂಕಿನ ಕುಂದರಗಿ ಗ್ರಾಮದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
25ಲಕ್ಷ ರೂಪಾಯಿ ವೆಚ್ಚದಲ್ಲಿ ಕುಂದರಗಿಯ ಶ್ರೀ ದ್ಯಾಮವ್ವ ದೇವಿ ಸಮುದಾಯ ಭವನ ಕಟ್ಟಡ ಕಾಮಗಾರಿ, 25ಲಕ್ಷ ರೂಪಾಯಿ ವೆಚ್ಚದಲ್ಲಿ ಶ್ರೀ ಲಕ್ಷ್ಮೀದೇವಿ ಸಭಾ ಭವನ ಹಾಗೂ 1.24ಲಕ್ಷ ರೂಪಾಯಿ ವೆಚ್ಚದಲ್ಲಿ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಲಾಯಿತು.
ಕುಂದರಗಿ ಗ್ರಾಪಂ ಸದಸ್ಯ ಶಿವಾನಂದ ತೋಟಗಿ ಮಾತನಾಡಿ, ಶಾಸಕ ರಮೇಶ ಜಾರಕಿಹೊಳಿ ಅವರು ಕುಂದರಗಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಅಭಿವೃದ್ಧಿ ಕಾಮಗಾರಿಗಳಿಗೆ ಜನರ ಸಹಕಾರ ಅಗತ್ಯವಾಗಿದ್ದು, ಈ ದೀಸೆಯಲ್ಲಿ ಕುಂದರಗಿ ಗ್ರಾಮದ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಕುಂದರಗಿ ಗ್ರಾಮ ಪಂಚಾಯತ ಸದಸ್ಯರು ಹಾಗೂ ಗ್ರಾಮಸ್ಥರಿಂದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹಾಗೂ ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡ್ರ ಅವರನ್ನು ಆತ್ಮೀಯವಾಗಿ ಸತ್ಕರಿಸಿದರು.
ಕುಂದರಗಿ ಗ್ರಾಪಂ ಅಧ್ಯಕ್ಷೆ ಅರಬವ್ವ ಹರಿಜನ, ಉಪಾಧ್ಯಕ್ಷೆ ಯಮನವ್ವ ಪೂಜೇರಿ, ಮಾಜಿ ಜಿಪಂ ಸದಸ್ಯ ರಾಮಣ್ಣ ಸುಂಬಳಿ, ಉತ್ತಮ ನಾಡಗೌಡ್ರ, ಶಿವಾನಂದ ತೋಟಗಿ, ಉತ್ತಮ ದಂಡಿನ, ನಾಗಪ್ಪ ತಳವಾರ, ಅಲ್ಲಾಸಾಬ ಮುಲ್ಲಾ, ದೊಡ್ಡಪ್ಪ ನಾಯ್ಕ, ಪರಶುರಾಮ ಗೋಡಿ, ಬೋರಪ್ಪ ತಳವಾರ, ಬೆಣಚಿನಮರ್ಡಿ(ಉ) ಗ್ರಾಪಂ ಅಧ್ಯಕ್ಷ ಗಂಗಾಧರ ಪಾಟೀಲ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆನಂದ ಅತ್ತುಗೋಳ ಸೇರಿದಂತೆ ಗ್ರಾಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts: