ಗೋಕಾಕ:ನೆಮ್ಮದಿಯ ಬದುಕಿಗೆ ವಿದ್ಯೆಯು ಅತಿ ಅವಶ್ಯಕ : ಸೋಮಶೇಖರ
ನೆಮ್ಮದಿಯ ಬದುಕಿಗೆ ವಿದ್ಯೆಯು ಅತಿ ಅವಶ್ಯಕ : ಸೋಮಶೇಖರ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 2 :
ನೆಮ್ಮದಿಯ ಬದುಕಿಗೆ ವಿದ್ಯೆಯು ಅತಿ ಅವಶ್ಯಕವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುವಂತೆ ರೋಟರಿ ಸಂಸ್ಥೆಯ ಸೋಮಶೇಖರ ಮಗದುಮ್ಮ ಹೇಳಿದರು.
ಸಮಿಪದ ಶಿಂಗಳಾಪೂರ ನಾರಾಯಣ ಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರೋಟರಿ ಸಂಸ್ಥೆಯಿಂದ ಉಚಿತವಾಗಿ ಎಲ್.ಇ.ಡಿ ಪ್ರೋಜಕ್ಟ ನೀಡಿದ ನಿಮಿತ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾವಂತರಾದರೆ ಉತ್ತಮ ನಾಗರಿಕರಾಗಿ ಬದುಕಲು ಸಾಧ್ಯ. ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಪ್ರತಿಭಾವಂತರಾಗಿರಿ ಗ್ರಾಮೀಣ ವಿದ್ಯಾರ್ಥಿಗಳು ಹೆಚ್ಚಿನ ತಾಂತ್ರಿಕ ಶಿಕ್ಷಣ ಕಲ್ಪಿಸುವಲ್ಲಿ ರೋಟರಿ ಸಂಸ್ಥೆ ಶ್ರಮಿಸುತ್ತಿದೆ. ಶಿಕ್ಷಕರು ಇದರ ಸದುಪಯೋಗದಿಂದ ವಿದ್ಯಾರ್ಥಿಗಳ ಜ್ಞಾನ ಹೆಚ್ಚಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ರೋಟರಿ ಸಂಸ್ಥೆಯ ಅಧ್ಯಕ್ಷ ಗಣೇಶ್ ವರದಾಯಿ, ಕಾರ್ಯದರ್ಶಿ ದಿಲೀಪ್ ಮೆಳವಂಕಿ, ಮುಖ್ಯೋಪಾಯ ಎಸ್.ಐ. ಹಳ್ಳಿ ಸೇರಿದಂತೆ ಅನೇಕರು ಇದ್ದರು.