ಗೋಕಾಕ:ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಿ : ಶಾಸಕ ಸೂಚನೆ
ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಿ : ಶಾಸಕ ಸೂಚನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಜು 9 :
ಸತತ ಸುರಿಯುತ್ತಿರುವ ಮಳೆಯಿಂದ ನದಿಗಳಲ್ಲಿ ಪ್ರವಾಹ ಹೆಚ್ಚಾಗುವ ಸಂಭವ ವಿದ್ದು, ಅಧಿಕಾರಿಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಸನ್ನಧರಾಗಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಶನಿವಾರದಂದು ನಗರದ ತಮ್ಮ ಕಾರ್ಯಾಲಯದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಯ್ಯಾದ್ರಿ ಪ್ರದೇಶದಲ್ಲಿ ಬಾರಿ ಮಳೆಯಾಗುತ್ತಿದ್ದು, ಅಧಿಕಾರಿಗಳು ಹಿಡಿಕಲ್ ಜಲಾಶಯ ನೀರಿನ ಮಟ್ಟವನ್ನು ಅರಿತು ಪ್ರವಹ ಪರಿಸ್ಥಿಯನ್ನು ಎದುರಿಸಲು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಮಳೆಗಾಲದಲ್ಲಿ ಬಿಳುವ ವಿದ್ಯುತ್ ಕಂಬಗಳನ್ನು ತಕ್ಷಣ ದುರಸ್ಥಿ ಗೋಳಿಸಿ ಹೆಸ್ಕಾಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ನದಿ ತೀರದ ವಾಸಿಸುವ ರೈತರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಬೇಕು. ನದಿ ತಿರದ ಪ್ರದೇಶಗಳಲ್ಲಿ ಸತತ ನಿಗಾ ವಹಿಸಬೇಕು.ಪೊಲೀಸ್ ಇಲಾಖೆ ಅಧಿಕಾರಿಗಳು ಇತರ ಇಲಾಖೆಗಳೊಂದಿಗೆ ಸಹಕಾರ ನೀಡಿ ಕಾರ್ಯಪ್ರವೃತ್ತವಾಗಬೇಕು. ಅಗ್ನಿಶಾಮಕ ದಳದವರು ತಮ್ಮ ಎಸ್.ಡಿ.ಆರ್.ಎಫ್. ತಂಡದೊಂದಿಗೆ ಸಂರ್ಪಕ ಸಾಧಿಸಿ ಪರಸ್ಪರ ಹೊಂದಾಣಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದ ಅವರು ನಗರದಲ್ಲಿ ನಿರ್ಮಿಸಲಾಗುತ್ತಿರುವ ಪೂಟಪಾಥ್ ಕಾಮಗಾರಿಯನ್ನು ಬೇಗನೆ ಮುಗಿಸಬೇಕು. ಇನ್ನೂವರೆಗೂ ಯಾರು ಸಹಕಾರ ನೀಡಿಲ್ಲ ಅವರಿಗೆ ಖಡಕ್ ಎಚ್ಚರಿಕೆ ನೀಡಿ ತಕ್ಷಣ ಕಾರ್ಯಮಾಡಬೇಕು ಎಂದು ಹೇಳಿದರು
ಸರಕಾರಿ ಪದವಿಪೂರ್ವ ಕಾಲೇಜಿಗೆ ಜಾಗೆ : ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಸರಕಾರಿ ಪದವಿಪೂರ್ವ ಕಾಲೇಜಿಗೆ ನಗರದಲ್ಲಿ ಶೀಘ್ರ ಜಾಗೆಯನ್ನು ಗುರಿತಿಸಿ ಆದಷ್ಟು ಬೇಗ ಕಟ್ಟಡ ಕಾಮಗಾರಿ ಪ್ರಾಂಭಿಸಲು ನಗರಸಭೆ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಶಾಸಕರು ಸೂಚಿಸಿದರು.
ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಮಾತನಾಡಿ ಪ್ರವಾಹ ಪರಿಸ್ಥಿತಿ ಎದುರಿಸಲು ಈಗಾಗಲೇ ಎಲ್ಲಾ ಇಲಾಖೆಯ ಅಧಿಕಾರಗಳ ಸಭೆಗಳನ್ನು ಕರದೆ ಪ್ರವಾಹ ಪರಿಸ್ಥಿತಿ ಎದುರಿಸಲು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದ್ದ, ಸತತವಾಗಿ ಅಧಿಕಾರಿಗಳ ತಂಡ ಪ್ರವಾಹ ಪರಿಸ್ಥಿತಿ ಹಾಗೂ ಸಂಭವನೀಯ ಪ್ರದೇಶಗಳ ಮೇಲಾ ನಿಗ್ಹಾ ವಹಿಸಲಾಗುತ್ತಿದೆ ಎಂದು ಸಭೆಗೆ ವಿವರಿಸಿದರು.
ಕೃಷಿ ಅಧಿಕಾರಿ ಎಂ ಎಂ ನಧಾಫ ಮಾತನಾಡಿದ ಮಳೆ ಪ್ರಮಾಣ ಕಡಿಮೆ ಇರುವದರಿಂದ ಯಾವುದೇ ಬೆಳೆಹಾನಿ ಸಂಭವಿಸಿಲ್ಲ, ರೈತರಿಗೆ ವಿತರಿಸುವ ಬಿಜಗಳ ದಾಸ್ತಾನು ಪೂರ್ಣ ಪ್ರಾಮಾಣದಲ್ಲಿ ಇರುವದರಿಂದ ಯಾವುದೇ ತೊಂದರೆ ಇರುವದಿಲ್ಲ ಎಂದು ಸಭೆಗೆ ವಿವರಿಸಿದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಶಿವಾನಂದ ಹಿರೇಮಠ, ಡಿ.ಎಸ್.ಪಿ ಮನೋಜ ಕುಮಾರ್ ನಾಯಕ, ತಾಪಂ ಎಇಓ ಮುರಳೀಧರ ದೇಶಪಾಂಡೆ , ತಾಲೂಕು ಆರೋಗ್ಯ ಅಧಿಕಾರಿ ಡಾ.ಎಂ.ಎಸ್.ಕೊಪ್ಪದ, ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ್, ಹೆಸ್ಕಾಂ ಅಧಿಕಾರಿ ಎಸ್.ಪಿ.ವರಾಳೆ, ಸಿ.ಪಿ.ಐಗಳಾದ ಗೋಪಾಲ ರಾಠೋಡ , ಶ್ರೀಶೈಲ ಬ್ಯಾಕೂಡ ಅನೀಲಕುಮಾರ ಸಿಂಗೆ , ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.