ಗೋಕಾಕ:ವಂದೇ ಮಾತರಂ ಸಂಗೀತ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಲಖನ್ ಚಾಲನೆ
ವಂದೇ ಮಾತರಂ ಸಂಗೀತ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಲಖನ್ ಚಾಲನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 16 :
ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಲಖನ್ ಜಾರಕಿಹೊಳಿ ಅವರ ಅಭಿಮಾನಿ ಬಳಗದ ವತಿಯಿಂದ ಸೋಮವಾರದಂದು ಸಾಯಂಕಾಲ ನಗರದ ಮಯೂರ ಶಾಲಾ ಆವರಣದಲ್ಲಿ ಜರುಗಿದ ವಂದೇ ಮಾತರಂ ಸಂಗೀತ ಕಾರ್ಯಕ್ರಮವನ್ನು ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೀಡಿ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಯೋಧರನ್ನು ಹಾಗೂ ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರ ಕುಟುಂಬ ವರ್ಗದವರನ್ನು ಸತ್ಕರಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಜಿಪಂ ಮಾಜಿ ಸದಸ್ಯರುಗಳಾದ ಟಿ.ಆರ್.ಕಾಗಲ್, ತಾಪಂ ಇಒ ಮುರಳೀಧರ ದೇಶಪಾಂಡೆ, ಬಿಇಒ ಜಿ.ಬಿ.ಬಳಗಾರ, ಡಾ.ರವೀಂದ್ರ ಅಂಟಿನ್, ಪೌರಾಯುಕ್ತ ಶಿವಾನಂದ ಹಿರೇಮಠ, ಎಸ್.ಪಿ ವರಾಳೆ, ಡಾ.ಮೊಹನ ಕಮತ, ಎಂ.ಡಿ.ಚುನಮರಿ, ಸೈದಪ್ಪ ಗದಾಡಿ, ಜಯಶೀಲ ಶೆಟ್ಟಿ, ಆಸೀಫ್ ಮುಲ್ಲಾ ಉಪಸ್ಥಿತರಿದ್ದರು.