ಅಥಣಿ:ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ : ಅಥಣಿ ಪಟ್ಟಣದಲ್ಲಿ ಘಟನೆ
ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ : ಅಥಣಿ ಪಟ್ಟಣದಲ್ಲಿ ಘಟನೆ
ನಮ್ಮ ಬೆಳಗಾವಿ ಇ – ವಾರ್ತೆ, ಅಥಣಿ ಅ 20 :
ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಮುಖಾಮುಖಿ ಭೀಕರ ರಸ್ತೆ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದ್ದು, ಇಬ್ಬರು ವಾಹನ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅಥಣಿ ಪಟ್ಟಣದಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಅಪಘಾತ: ಅಥಣಿ ಪಟ್ಟಣದ ಹೊರವಲಯದಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿಗಳಿದ್ದ ಬಸ್ ಹಾಗೂ ಕ್ಯಾಂಟರ್ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಕಾಲೇಜು ವಾಹನ ಚಾಲಕ ಮತ್ತು ಕ್ಯಾಂಟರ್ ವಾಹನ ಚಾಲಕ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
50ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದ ಬಸ್ನಲ್ಲಿ 10 ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಬೆಳಗಾವಿ ಎಸ್ಪಿ ಡಾ.ಸಂಜೀವ್ ಪಾಟೀಲ ತಿಳಿಸಿದ್ದಾರೆ.
ಅಥಣಿಯಲ್ಲಿ ಕಾಲೇಜು ಬಸ್ ಕ್ಯಾಂಟರ್ ಮಧ್ಯೆ ಡಿಕ್ಕಿ :
ಘಟನಾ ಸ್ಥಳಕ್ಕೆ ಈಗಾಗಲೇ ಅಥಣಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಬಸ್ನಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರ ಸಹಾಯದಿಂದ ಪೊಲೀಸರು ಹೊರತೆಗೆಯುತ್ತಿದ್ದಾರೆ. ಈ ವೇಳೆ, ಭಯಗೊಂಡ ವಿದ್ಯಾರ್ಥಿಗಳು ಕಿರುಚಾಟ ನಡೆಸುತ್ತಿದ್ದಾರೆ. ಅಪಘಾತದ ಸುದ್ದಿ ತಿಳಿದು ಕುಟುಂಬಸ್ಥರು ಕೂಡ ಆತಂಕ್ಕೆ ಒಳಗಾಗಿದ್ದಾರೆ. ಇದರಿಂದ ಸ್ಥಳದಲ್ಲೇ ಜನಜಂಗುಳಿ ತುಂಬಿದ್ದು, ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.