RNI NO. KARKAN/2006/27779|Thursday, December 12, 2024
You are here: Home » breaking news » ಗೋಕಾಕ:ಶಾಸಕ ರಮೇಶ ಜಾರಕಿಹೊಳಿ ಅವರು ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ : ಜಗದೀಶ ಸಾತಿಹಾಳ

ಗೋಕಾಕ:ಶಾಸಕ ರಮೇಶ ಜಾರಕಿಹೊಳಿ ಅವರು ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ : ಜಗದೀಶ ಸಾತಿಹಾಳ 

ಶಾಸಕ ರಮೇಶ ಜಾರಕಿಹೊಳಿ ಅವರು ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ : ಜಗದೀಶ ಸಾತಿಹಾಳ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 4 :

 
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳಲು ಶಾಸಕ ರಮೇಶ ಜಾರಕಿಹೊಳಿ ಅವರು, ಉಚಿತವಾಗಿ ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸಲು ಶ್ರಮಿಸುತ್ತಿದ್ದಾರೆ ಎಂದು ಉಪನ್ಯಾಸಕ ಜಗದೀಶ ಸಾತಿಹಾಳ ಹೇಳಿದರು.
ಅವರು, ನಗರದ ಶ್ರೀ ಮಹಾಲಕ್ಷ್ಮೀ ಸಭಾ ಭವನದಲ್ಲಿ ಸ್ಫರ್ಧಾ ಗೋಕಾಕ ಕರಿಯiರ್ ಅಕಾಡೆಮಿ ಮೂಲಕ ಶಾಸಕ ರಮೇಶ ಜಾರಕಿಹೊಳಿ ಅವರ ನೇತ್ರತ್ವದಲ್ಲಿ 200ಜನ ವಿದ್ಯಾರ್ಥಿಗಳ ಉಚಿತ ಸ್ಫರ್ಧಾತ್ಮಕ ತರಬೇತಿ ಉದ್ಘಾಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ನಿರಂತರ ಅಧ್ಯಯನಶೀಲತೆ ಅತಿಅವಶ್ಯಕವಾಗಿದೆ. ಸಾಧನೆಗಳಿಗೆ ಕಷ್ಟಗಳು ಎಂದು ಅಡ್ಡಿಯಾಗಲಾರದು. ಸಾಧಿಸುವ ಚಲವನ್ನು ವಿದ್ಯಾರ್ಥಿಗಳು ಹೊಂದಿರಬೇಕು. ತಮ್ಮ ಸಾಧನೆಯ ಮೂಲಕ ಶಾಸಕ ರಮೇಶ ಜಾರಕಿಹೊಳಿ ಅವರ ಕನಸನ್ನು ನನಸಾಗಿಸುವಂತೆ ಕರೆ ನೀಡಿದರು.
ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯ್ಕ ಮಾತನಾಡಿ, ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ತಮ್ಮ ಅಮೂಲ್ಯವಾದ ಜೀವನವನ್ನು ಶಿಕ್ಷಕರ ಮಾರ್ಗದರ್ಶನದಲ್ಲಿ ಸತತ ಪರಿಶ್ರಮದ ಮೂಲಕ ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ನಮ್ಮ ಜ್ಞಾನ ಮಟ್ಟವನ್ನು ಹೆಚ್ಚಿಸುವ ಪುಸ್ತಕಗಳು, ಪತ್ರಿಕೆಗಳನ್ನು ಸಹ ತಾವು ಹೆಚ್ಚೆಚ್ಚು ಓದುವ ಹವ್ಯಾಸ ಬೆಳೆಸಿಕೊಂಡು, ತಮ್ಮ ಜ್ಞಾನ ಮಟ್ಟವನ್ನು ಹೆಚ್ಚಿಸಿ, ಉನ್ನತ ಹುದ್ದೆಗಳನ್ನು ಅಲಂಕರಿಸಲು ಶ್ರಮಿಸುವಂತೆ ಕರೆ ನೀಡಿದರು.
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ರಾಜೇಶ್ವರಿ ಒಡೆಯರ ಮಾತನಾಡಿ, ರಾಜ್ಯದಲ್ಲಿ ಮಾದರಿ ಕಾರ್ಯಕ್ರಮಗಳನ್ನು ನೀಡುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದ ಹೆಣ್ಣುಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸರಕಾರಿ ಶಾಲೆಗಳನ್ನು ದತ್ತು ಪಡೆದು ಅವರಿಗೆ ಜ್ಞಾನಾರ್ಜನೆ ನೀಡುತ್ತಿದ್ದಾರೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಯನ್ನು ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಮುಂದಾಗಿರುವದು ಕ್ಷೇತ್ರದ ಹೆಮ್ಮೆಯ ಸಂಗತಿ ಎಂದರು.
ಕಾರ್ಯಕ್ರಮವನ್ನು ಕೆಎಮ್‍ಎಫ್ ನಿರ್ದೇಶಕ ಅಮರನಾಥ ರಮೇಶ ಜಾರಕಿಹೊಳಿ ಅವರು ಉದ್ಘಾಟಿಸಿದರು.
ವೇದಿಕೆಯ ಮೇಲೆ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಮಾಜಿ ಸೈನಿಕರಾದ ಲಕ್ಷ್ಮಣ ಸಾರಾಪುರ, ರಮೇಶ ಚೌಗಲಾ, ಸ್ಫರ್ಧಾ ಗೋಕಾಕ ಅಕಾಡೆಮಿಯ ರವಿ ಕಂಟಿಕಾರ, ಸಿದ್ದು ಮೂಸಗೌಡರ. ಮುಖಂಡರುಗಳಾದ ಅಬ್ಬಾಸ ದೇಸಾಯಿ, ದುರ್ಗಪ್ಪ ಶಾಸ್ತ್ರಿಗೊಲ್ಲರ, ಸಿದ್ದಪ್ಪ ಹುಚ್ಚರಾಮಗೋಳ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನೂರಾರು ಜನ ವಿದ್ಯಾರ್ಥಿಗಳು ಇದ್ದರು.
ಪವಿತ್ರಾ ಹತ್ತರವಾಟ ಸ್ವಾಗತಿಸಿದರು, ಶೃತಿ ಜಾಧವ ನಿರೂಪಿಸಿ, ವಂದಿಸಿದರು.

Related posts: