RNI NO. KARKAN/2006/27779|Friday, December 13, 2024
You are here: Home » breaking news » ಗೋಕಾಕ:ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ : ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ

ಗೋಕಾಕ:ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ : ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ 

ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ : ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ

 

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 5 :

 

ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು , ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು .

ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 135ನೇ ಹುಟ್ಟು ಹಬ್ಬದ ಸವಿನೆನಪಿನಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತಮ ಶಿಕ್ಷಣ ಪಡೆದ ವಿದ್ಯಾರ್ಥಿಗಳು ರಾಜ್ಯದ ಭವಿಷ್ಯವನ್ನು ರೂಪಿಸುತ್ತಿದ್ದಾರೆ.ಆ ನಿಟ್ಟಿನಲ್ಲಿ ಗೋಕಾಕ ಮತ್ತು ಮೂಡಲಗಿ ವಲಯಗಳಲ್ಲಿ ಶಾಸಕ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿ ಕಾರ್ಯಮಾಡುತ್ತಿದ್ದಾರೆ. ಸರಕಾರದಿಂದ ದೊರಕುವ ಎಲ್ಲ ಯೋಜನೆಗಳನ್ನು ವಲಯಗಳಿಗೆ ಮುಟ್ಟಿಸುವ ಕಾರ್ಯ ಶಾಸಕರು ಮಾಡುತ್ತಿದ್ದಾರೆ ಇದರ ಸದುಪಯೋಗ ಪಡೆದುಕೊಂಡು ಎಲ್ಲರೂ ವಿದ್ಯಾವಂತರಾಗಬೇಕು ಎಂದ ಅವರು ಒಬ್ಬ ಒಳ್ಳೆಯ ವಿದ್ಯಾರ್ಥಿಯನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಅಂತಹ ಪವಿತ್ರ ಕಾರ್ಯವನ್ನು ಮಾಡುತ್ತಿರುವ ಶಿಕ್ಷಕರ ಕಾರ್ಯ ಶ್ಲಾಘಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಮಾತನಾಡಿ ಶಿಕ್ಷಕರು ವೃತ್ತಿಯ ಗೌರವವನ್ನು ಹೆಚ್ಚಿಸುವ ಕಾರ್ಯಮಾಡಬೇಕು. ಶೈಕ್ಷಣಿಕ ಚಟುವಟಿಕೆಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಪ್ರೇರಣೆ ನೀಡುತ್ತಿದ್ದಾರೆ. ಗೋಕಾಕ ಶೈಕ್ಷಣಿಕ ವಲಯದಲ್ಲಿ ಮಾಡಿದ 9 ಕಾರ್ಯಕ್ರಮಗಳನ್ನು ಇಲಾಖೆ ರಾಜ್ಯ ಮಟ್ಟಕ್ಕೆ ವಿಸ್ತರಣೆ ಮಾಡಿರುವುದು ಸಂತೋಷ ತಂದಿದೆ. ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಹತ್ವವನ್ನು ನೀಡಿ ಕಾರ್ಯಮಾಡುತ್ತಿದ್ಧೇವೆ. ವಲಯದ ಸರಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗೋಕಾಕ ವಲಯದ ನಿವೃತ್ತ ಹೊಂದಿದ ಶಿಕ್ಷಕಿ ಮತ್ತು ಶಿಕ್ಷಕರನ್ನು ಸತ್ಕರಿಸಿ, ಗೌರವಿಸಲಾಯಿತು.

ವೇದಿಕೆಯಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ತಾ.ಪಂ ಎಇ ಮುರಳೀಧರ ದೇಶಪಾಂಡೆ, ಜಿಪಂ ಮಾಜಿ ಸದಸ್ಯರುಗಳಾದ ಟಿ.ಆರ.ಕಾಗಲ್, ಮಡೆಪ್ಪ ತೋಳಿನವರ, ಭೀಮಗೌಡ ಪೊಲೀಸಗೌಡ ಪಾಟೀಲ , ಪೌರಾಯುಕ್ತ ಶಿವಾನಂದ ಹಿರೇಮಠ, ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಬಿಸಿಯೂಟ ಅಧಿಕಾರಿ ಮಲಬನ್ನವರ, ಎಸ್.ಬಿ . ವರಾಳೆ, ಡಾ.ಮುತ್ತಣ್ಣ ಕೊಪ್ಪದ , ವಲಯ ಅರಣ್ಯ ಅಧಿಕಾರಿ ಎಸ್.ಆರ್.ಸವಸುದ್ದಿ, ಗೋಪಾಲ ಮಾಳಗಿ, ಸಿಡಿಪಿಓ ಶ್ರೀಮತಿ ಶೀಲವಂತ , ಡಾ.ಮೋಹನ ಕಮತ, ಎಂ.ಎಂ ನಧಾಪ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕರಾದ ಆರ್‌.ಎಲ್. ಮಿರ್ಜಿ ಮತ್ತು ಟಿ.ಬಿ.ಬಿಲ್ ನಿರೂಪಿ‌ಸಿ,ವಂದಿಸಿದರು.

Related posts: