RNI NO. KARKAN/2006/27779|Saturday, October 19, 2024
You are here: Home » breaking news » ಗೋಕಾಕ:ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ

ಗೋಕಾಕ:ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ 

ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 20:

 

ತಾಲೂಕಿನ ಅಂಕಲಗಿ ಪಟ್ಟಣದಲ್ಲಿ ಆಯೋಜಿಸಿದ್ದ ಅಡವಿಸಿದ್ದೇಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಗೋಕಾಕ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟಗಳಲ್ಲಿ ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಪೂರ್ವ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕರ ಕಬ್ಬಡ್ಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಹಾಗೂ ವಯಕ್ತಿಕ ವಿಭಾಗದಲ್ಲಿ ಕಲ್ಮೇಶ ಕರಿಗಾರ 400 ಮೀ ಓಟದಲ್ಲಿ ಪ್ರಥಮ, ಅಭಿಷೇಕ ಡೊಂಗರ 100 ಮೀ ಓಟದಲ್ಲಿ ದ್ವೀತಿಯ, ಬಾಳೇಶ ಕಮತಿ ಎತ್ತರ ಜೀಗಿತದಲ್ಲಿ ಪ್ರಥಮ, ಸಮರ್ಥ ಕೊಣ್ಣೂರೆ ತ್ರೀವಿಧ ಜೀಗಿತದಲ್ಲಿ ದ್ವೀತಿಯ, ರಾಜೆಭಕ್ಷ ನದಾಫ ಗುಂಡು ಮತ್ತು ಚಕ್ರ ಎಸೇತದಲ್ಲಿ ದ್ವೀತಿಯ, ಬಾಲಕರ ರೀಲೆ ತಂಡ ದ್ವೀತಿಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಚೇರಮನ ಡಾ.ಭೀಮಶಿ ಜಾರಕಿಹೊಳಿ, ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ, ಪ್ರಾಚಾರ್ಯ ಅರುಣ ಪೂಜೇರ, ಉಪಪ್ರಾಚಾರ್ಯ ಕೆ ಎಲ್ ಗುಂಡ್ಯಾಗೋಳ, ದೈಹಿಕ ಶಿಕ್ಷಣ ಮಾರ್ಗದರ್ಶಕ ಎಸ್ ಬಿ ಬಾಗಾಯಿ ಹಾಗೂ ಸಿಬ್ಬಂಧಿ ಅಭಿನಂಧಿಸಿದ್ದಾರೆ.

Related posts: