RNI NO. KARKAN/2006/27779|Friday, November 8, 2024
You are here: Home » breaking news » ಗೋಕಾಕ:ಪೌರ ಕಾರ್ಮಿಕರು ನಗರದ ಜೀವನಾಡಿಗಳಾಗಿದ್ದಾರೆ : ಪೌರಾಯುಕ್ತ ಶಿವಾನಂದ ಹಿರೇಮಠ

ಗೋಕಾಕ:ಪೌರ ಕಾರ್ಮಿಕರು ನಗರದ ಜೀವನಾಡಿಗಳಾಗಿದ್ದಾರೆ : ಪೌರಾಯುಕ್ತ ಶಿವಾನಂದ ಹಿರೇಮಠ 

ಪೌರ ಕಾರ್ಮಿಕರು ನಗರದ  ಜೀವನಾಡಿಗಳಾಗಿದ್ದಾರೆ : ಪೌರಾಯುಕ್ತ ಶಿವಾನಂದ ಹಿರೇಮಠ

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 22 :

ಪೌರ ಕಾರ್ಮಿಕರು ನಗರದ  ಜೀವನಾಡಿಗಳಾಗಿದ್ದಾರೆ, ಅಂತಹ ಸೇವಾ ನಿರತ ಪೌರ ಕಾರ್ಮಿಕರ ದಿನಾಚರಣೆಯನ್ನು ಸರಕಾರದ ವತಿಯಿಂದ ಆಚರಿಸುತ್ತಾ ಬರುತ್ತಿರುವದು ಅತ್ಯಂತ ಸ್ವಾಗತಾರ್ಹ ಕಾರ್ಯವಾಗಿದೆ ಎಂದು ನಗರಸಭೆ ಪೌರಾಯುಕ್ತ ಶಿವಾನಂದ ಹಿರೇಮಠ  ಹೇಳಿದರು.

       ಶುಕ್ರವಾರದಂದು ನಗರಸಭೆ  ಸಭಾಭವನದಲ್ಲಿ ನಡೆದ ಪೌರ ಸೇವಾ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಸಿಸಿ ಮಾತನಾಡಿದ ಅವರು ನಗರದಲ್ಲಿ  ರೋಗ ರುಜನಿಗಳು ಹರಡದಂತೆ ಪೌರ ಕಾರ್ಮಿಕರು ತಮ್ಮ ಆರೋಗ್ಯವನ್ನು ಲೆಕ್ಕಿಸದೆ  ಕಾರ್ಯ ನಿರ್ವಹಿಸುತ್ತಿದ್ದಾರೆ. ಪೌರ ಕಾರ್ಮಿಕರು ಆರೋಗ್ಯವಾಗಿದ್ದರೆ ಮಾತ್ರ ನಗರದ ಜನರು  ಆರೋಗ್ಯದಿಂದಿರಲು ಸಾದ್ಯ ಆನಿಟ್ಟಿನಲ್ಲಿ ಪೌರಕಾರ್ಮಿಕರು ಕೆಲಸದ ವೇಳೆ ಸರಕಾರ ನೀಡಿದ ಹ್ಯಾಂಡ ಬ್ಲೌಜ್ ಶೂಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿದರು.

ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಚತೆಯ ಕುರಿತು ಬಿಡುವಿಲ್ಲದೆ ನಿರಂತರ ಸೇವೆ ಸಲ್ಲಿಸುವ ಪೌರ ಕಾರ್ಮಿಕರ ಸೇವೆ ಹಾಗೂ ಅವರ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯುವ ಸಲುವಾಗಿ ಪೌರ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಸ್ವಚ್ಛತೆಯ ಕುರಿತು ಕಾನೂನು ಜಾರಿಗೆ ಬಂದರೆ ಸಾಲದು, ಜನರ ಮನಸ್ಥಿತಿ ಪರಿವರ್ತನೆ ಆಗಬೇಕು, ಪರಿಸರವನ್ನು ಸ್ವಚ್ಛವಾಗಿರಿಸುವಲ್ಲಿ ಪೌರ ಕಾರ್ಮಿಕರ ಕೊಡುಗೆ ಅಪಾರವಾದುದು ಎಂದು ಪೌರಾಯುಕ್ತ ಶಿವಾನಂದ ಹಿರೇಮಠ ಹೇಳಿದರು.

ಕಾರ್ಯಕ್ರಮವನ್ನು ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ ಸಹಾಯಕ ಸುರೇಶ್ ಸನದಿ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ  ಪೌರ ಕಾರ್ಮಿಕರು ತಮ್ಮ  ವಿವಿಧ ಬೇಡಿಕೆಗಳನ್ನೊಳಗೊಂಡ ಮನವಿ ಪತ್ರವನ್ನು ಶಾಸಕರಿಗೆ ಮತ್ತು  ಪೌರಾಯುಕ್ತರಿಗೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ ,ಸ್ಥಾಯಿ ಸಮಿತಿ ಚೇರಮನ್  ಹುಚ್ಚರಾಯಪ್ಪಗೋಳ, ತಾಲೂಕಾ ಆರೋಗ್ಯಾಧಿಕಾರಿ ಡಾ‌.ಎಂ.ಎಸ್.ಕೊಪ್ಪದ , ಎಂ.ಎಚ್.ಗಜಾಕೋಶ, ಜಯೇಶ ತಾಂಬೂಳೆ, ಕೋಳಿ ನಗರಸಭೆ ಸದಸ್ಯರಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ , ಮುಖಂಡರಾದ ದುರ್ಗಪ್ಪ ಶಾಸ್ತ್ರೀಗೋಲ್ಲರ, ಜತ್ತಿ , ಸೇರಿದಂತೆ ಇತರರು ಉಪಸ್ಥಿತರಿದ್ದರು.

Related posts: