ಗೋಕಾಕ:ಗೋಕಾಕ ಶೈಕ್ಷಣಿಕ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಸುರೇಶ್ ಸನದಿ
ಗೋಕಾಕ ಶೈಕ್ಷಣಿಕ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಸುರೇಶ್ ಸನದಿ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಸೆ 30 :
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಗೋಕಾಕ ಶೈಕ್ಷಣಿಕ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವು ಶುಕ್ರವಾರದಂದು ನಗರದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಪಂ ಸದಸ್ಯ ಸುರೇಶ್ ಸನದಿ ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮಲ್ಲಿರುವ ಅಘಾದ ಪ್ರತಿಭೆಗಳನ್ನು ವೇದಿಕೆಯ ಮೂಲಕ ಪ್ರರ್ದಶಿಸಿ ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಪ್ರತಿಭಾವಂತರಾಗಿ ತಾಲೂಕಿನ ಕೀರ್ತಿಯನ್ನು ಹೆಚ್ಚಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ನಗರಸಭೆ ಅಧ್ಯಕ್ಷ ಜಯಾನಂದ ಹುಣ್ಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಬಿಸಿಯೂಟ ಅಧಿಕಾರಿ ಮಲಬನ್ನವರ , ಕೆ.ಎಲ್.ತೋರಣಗಟ್ಟಿ, ವಿವಿಧ ಸಂಘಗಳ ಅಧ್ಯಕ್ಷರುಗಳು ಸೇರಿದಂತೆ ಅನೇಕರು ಇದ್ದರು.