ಗೋಕಾಕ:ಆನಂದ ಮಾಮನಿ ಅವರ ನಿಧನ ಪಕ್ಷಕ್ಕೆ ಹಾಗೂ ಜಿಲ್ಲೆಗೆ ತುಂಬಲಾರದ ನಷ್ಟ ಉಂಟಾಗಿದೆ : ಶಾಸಕ ರಮೇಶ
ಆನಂದ ಮಾಮನಿ ಅವರ ನಿಧನ ಪಕ್ಷಕ್ಕೆ ಹಾಗೂ ಜಿಲ್ಲೆಗೆ ತುಂಬಲಾರದ ನಷ್ಟ ಉಂಟಾಗಿದೆ : ಶಾಸಕ ರಮೇಶ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಅ 23 :
ಸವದತ್ತಿ ವಿದಾನಸಭಾ ಕ್ಷೇತ್ರದ ಶಾಸಕರು ಹಾಗೂ ಉಪಸಭಾಧ್ಯಕ್ಷರಾದ ಆನಂದ ಮಾಮನಿ ಅವರ ನಿಧನ ಪಕ್ಷಕ್ಕೆ ಹಾಗೂ ಜಿಲ್ಲೆಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಶಾಸಕ ರಮೇಶ ಜಾರಕಿಹೊಳಿ ಅವರು ಮಾಮನಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಮಾಮನಿಯವರು ಸವದತ್ತಿಯ ರೇಣುಕಾ ಯಲ್ಲಮ್ಮ ದೇವಿ ಆಡಳಿತ ಮಂಡಳಿ ಸದಸ್ಯರಾಗಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು ಮೂರು ಬಾರಿ ಶಾಸಕರಾಗಿ, ವಿಧಾನಸಭೆ ಡೆಪ್ಯುಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದವರು ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳ ಮೂಲಕ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೇ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ.
ಆನಂದ್ ಮಾಮನಿ ಅವರ ತಂದೆ ಚಂದ್ರಶೇಖರ್ ಮಾಮನಿ ಅವರು ಕೂಡ ಶಾಸಕರಾಗಿದ್ದವರು. ಅಲ್ಲದೆ, ಚಂದ್ರಶೇಖರ್ ಮಾಮನಿ ಅವರು 1990ರಲ್ಲಿ ವಿಧಾನಸಭೆಯ ಡೆಪ್ಯುಟಿ ಸ್ಪೀಕರ್ ಆಗಿದ್ದರು. ತಂದೆಯವರಂತೆ ಆನಂದ್ ಮಾಮನಿ ಅವರೂ 2020ರ ಮಾರ್ಚ್ 24ರಂದು ವಿಧಾನಸಭೆ ಉಪ ಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಮೂರು ಬಾರಿ ಶಾಸಕರಾದ ಅವರಿಗೆ ಸಚಿವರಾಗಬೇಕು, ಜನರಿಗೆ ಹೆಚ್ಚಿನ ಸೇವೆ ಒದಗಿಸಬೇಕು ಎಂಬ ತುಡಿತ ಇತ್ತು ವಿಧಿಯಾಟ ಅನಾರೋಗ್ಯದ ಹಿನ್ನಲೆ ಇಂದು ಅವರು ನಮ್ಮನ್ನು ಅಗಲಿದ್ದಾರೆ. ಅವರ ಆತ್ಮಕ್ಕೆ ಪರಮಾತ್ಮ ಚಿರ ಶಾಂತಿಯನ್ನು ನೀಡಲಿ, ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವದಾಗಿ ತಿಳಿಸಿದ್ದಾರೆ.