ಗೋಕಾಕ:ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ಬಿಇಒ ಜಿ.ಬಿ.ಬಳಗಾರ
ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ಬಿಇಒ ಜಿ.ಬಿ.ಬಳಗಾರ
ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ನ 5 :
ಪಠ್ಯದಷ್ಟೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು.
ಶನಿವಾರದಂದು ನಗರದ ಶೂನ್ಯ ಸಂಪಾದನ ಮಠದ ಶ್ರೀ ಚೆನ್ನಬಸವೇಶ್ವರ ವಿದ್ಯಾಪೀಠ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಹಮ್ಮಿಕೊಂಡ ಮಕ್ಕಳಿಂದ ಮೇಷಭೂಷಣ ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ಆಹಾರಗಳ ಪ್ರದರ್ಶನ ಹಾಗೂ ಅಮ್ಮನ ಆರೈಕೆಗೆ ಮಕ್ಕಳ ಹಾರೈಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ಸ್ವರ್ಧಾತ್ಮಕ ಯುಗದಲ್ಲಿ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಸಾಮಾನ್ಯ ಜ್ಞಾನ ಮಟ್ಟವನ್ನು ಹೆಚ್ಚಿಸಿಕೊಳ್ಳಿರಿ ಇದರಿಂದ ಸ್ವರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಸಹಕಾರಿಯಾಗುತ್ತದೆ. ಶಿಕ್ಷಕರು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅವರಲ್ಲಿಯ ಪ್ರತಿಭಗೆಗಳನ್ನು ಪ್ರೋತ್ಸಾಹಿಸಿ ಅವರನ್ನು ಪ್ರತಿಭಾವಂತರಾಗಿ ಮಾಡುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಅಡಿವೇಶ ಗಮಿಮಠ, ನಿರ್ದೆಶಕಿ ಸುಷ್ಮಾ ಪಾಟೀಲ,ಬಸವರಾಜ ಖಾನಪ್ಪನವರ , ಮುಖ್ಯೋಪಾಧ್ಯಾಯರಾದ ಜಗದೀಶ್ ಮುತ್ತನಾಳ, ದ್ರಾಕ್ಷಾಯಣಿ ಮಠಪತಿ ಇದ್ದರು.