RNI NO. KARKAN/2006/27779|Friday, November 22, 2024
You are here: Home » breaking news » ಗೋಕಾಕ:ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸಿ : ಟಿ.ಆರ್.ಕಾಗಲ್

ಗೋಕಾಕ:ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸಿ : ಟಿ.ಆರ್.ಕಾಗಲ್ 

ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸಿ : ಟಿ.ಆರ್.ಕಾಗಲ್

ನಮ್ಮ ಬೆಳಗಾವಿ ಇ – ವಾರ್ತೆ, ಗೋಕಾಕ ಡಿ 14 :

ದೇಶಿಯ ಕ್ರೀಡೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಯುವ ಪೀಳಿಗೆ ಮೇಲಿದೆ ಎಂದು ಜಿಪಂ ಮಾಜಿ ಸದಸ್ಯ ಟಿ ಆರ್ ಕಾಗಲ ಹೇಳಿದರು.
ಅವರು, ಮಂಗಳವಾರದಂದು ತಾಲೂಕಿನ ಮಾಲದಿನ್ನಿ ಗ್ರಾಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ತಾಲೂಕ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯತ ಮಾಲದಿನ್ನಿ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ದೇಶಿಯ ಕ್ರೀಡೆಗಳಲ್ಲಿ ಯುವ ಪೀಳಿಗೆ ಹೆಚ್ಚು ಪಾಲ್ಗೊಂಡು ಅವುಗಳನ್ನು ಬೆಳೆಸುವಂತಹ ಕಾರ್ಯ ಮಾಡಬೇಕು. ಸರಕಾರ ಗ್ರಾಮೀಣ ಭಾಗದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸುತ್ತಿದೆ. ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಅಧ್ಯಕ್ಷೆ ರುಕ್ಮವ್ವ ಭರಮನ್ನವರ, ಗ್ರಾಪಂ ಸದಸ್ಯ ಸುರೇಶ ಸನದಿ, ಸೀತವ್ವ ಮೆಳವಂಕಿ, ಯಲ್ಲಪ್ಪ ಬಂಗೆನ್ನವರ, ನ್ಯಾಯವಾದಿ ರಮೇಶ ಭಂಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಮ್ ಎಚ್ ದೇಶಪಾಂಡೆ, ಅನುಷ್ಠಾನಾಧಿಕಾರಿ ಬಸವರಾಜ ಹೊಸಮಠ, ಶಿಕ್ಷಣ ಇಲಾಖೆಯ ಎಲ್ ಕೆ ತೋರನಗಟ್ಟಿ, ಎನ್ ಯು ಶರನಪ್ಪಗೋಳ, ಎಸ್ ಎಸ್ ಮಾಳಗಿ ಸೇರಿದಂತೆ ಅನೇಕರು ಇದ್ದರು.

Related posts: